
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಚಂದೂರ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಭೂಮಿ ಪೂಜೆಯನ್ನು ನೆರವೇರಿಸಿದರು.

ಕುಡಿಯುವ ನೀರು ಮತ್ತು ಶೈಕ್ಷಣಿಕ ಮೂಲಭೂತ ಸೌಲಭ್ಯ ನನ್ನ ಆದ್ಯತೆಯ ಕ್ಷೇತ್ರಗಳು. ಕಳೆದ 4 ವರ್ಷದಲ್ಲಿ ಬಹುತೇಕ ಕಡೆ ಬೇಡಿಕೆಯನ್ನು ಈಡೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದಿರುವ ಕಾಮಗಾರಿಗಳನ್ನು ಸಹ ಆದ್ಯತೆಯ ಮೇಲೆ ಪೂರ್ಣಗೊಳಿಸಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದರು.
ಶಿಕ್ಷಣ, ನೀರು ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಸಹ ಕೆಲವರು ಕ್ಷುಲ್ಲಕ ರಾಜಕಾರಣ ಮಾಡಲು ಪ್ರಯತ್ನಿಸುತ್ತಾರೆ. ಜನರಿಗೆ ಒಳ್ಳೆಯದಾಗುವುದು ಅವರಿಗೆ ಬೇಕಾಗಿಲ್ಲ. ರಾಜಕೀಯವನ್ನು ಅಭಿವೃದ್ಧಿ ಕೆಲಸಗಳಿಂದ ದೂರವಿಡಬೇಕು. ಇಲ್ಲವಾದಲ್ಲಿ ಅಂತವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು, ಶಂಕರಗೌಡ ಪಾಟೀಲ, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ