Kannada NewsKarnataka News

​ಮಹಿಳೆಯರ ಕಷ್ಟಕಂಡು ಕಣ್ಣೀರಾದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನರೇಗಾ ಯೋಜನೆ ಹಾಗೂ ಇಟ್ಟಿಗೆ ಬಟ್ಟಿಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ಪಡುತ್ತಿರುವ ಕಷ್ಟ ಮತ್ತು ಅವರ ಕೌಟುಂಬಿಕ ಸಮಸ್ಯೆಗಳನ್ನು ಕಂಡು, ಕೇಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅಕ್ಷರಶಃ ಕಣ್ಣೀರಾದರು. 
​ದೇಸೂರ್ ಪ್ರದೇಶಕ್ಕೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳಕರ್, ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಸುಮಾರು 350ಕ್ಕೂ ಹೆಚ್ಚಿನ ​ ಮಹಿಳೆಯರನ್ನು ಭೇಟಿಮಾಡಿ ಸಂವಾದ ನಡೆಸಿದರು. ಅವರ ಆರೋಗ್ಯದ ಬಗ್ಗೆ ವಿಚಾರಿಸಿ, ಕೌಟುಂಬಿಕ ಪರಿಸ್ಥಿತಿಗಳನ್ನು ಆಲಿಸಿದರು. ಕೆಲಸ ಸ್ಥಳದಲ್ಲಿ ಅವರಿಗೆ ಎದುರಾಗುತ್ತಿರುವ ತೊಂದರೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
​ ದೇಸೂರ್ ಪ್ರದೇಶದಲ್ಲಿ ಈ ಮೊದಲು ​3 ಅಡಿ ಭೂಮಿಯನ್ನು ಅಗೆಯಲು ನಿರ್ಧರಿಸ​ಲಾಗಿತ್ತು. ಈ ಪ್ರದೇಶದಲ್ಲಿ ಭೂಮಿ ಬಹಳ ಗಟ್ಟಿಯಾಗಿರುವದರಿಂದ ಈಗ ಅದನ್ನು ​2 ಅಡಿಗೆ ಸೀಮಿತಗೊಳಿಸುವ​ುದು ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಲಕ್ಷ್ಮಿ ಹೆಬ್ಬಾಳಕರ್, ಅವುಗಳಿಗೆ ಪರಿಹಾರ ಒದಗಿಸುವಂತೆ ಸೂಚಿಸಿದರು.
 ನಂತರ ಇಟ್ಟಿಗೆಗಳ ಬಟ್ಟಿಗೆ ತೆರಳಿ ​ಅಲ್ಲಿಯೂ ಮಹಿಳೆಯರು ಪಡುವಪಾಡನ್ನು ಹತ್ತಿರದಿಂದ ನೋಡಿದರು. ಈ ಮಹಿಳೆಯರಿಗೆ ಸರಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಶಾಸಕರು ಬಂದು ತಮ್ಮ ಕಷ್ಟಗಳನ್ನು ಆಲಿಸಿದ್ದಕ್ಕೆ ಕಾರ್ಮಿಕ ಮಹಿಳೆಯರು ಖುಷಿಯಾಗಿ, ಧನ್ಯವಾದ ಸಲ್ಲಿಸಿದರು. ಇದೇ ವೇಳೆ ಲಕ್ಷ್ಮಿ ಹೆಬ್ಬಾಳಕರ್ ಗಿಡವೊಂದನ್ನು ನೆಟ್ಟು ಪರಿಸರದ ಮಹತ್ವ ತಿಳಿಸಿದರು. 
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸ್ನೇಹಾ ಕುಂಬಾರ, ಸಂತೋಷ ಮರಗಾಳಿ, ಸತೀಶ್ ಚ​ವ್ಹಾಣ​, ಗಣಪತ್ ಪಾಟೀಲ, ಸಂಕೇತ ಪಾಟೀಲ, ವಿದ್ಯಾ ಮನವಾಡಕರ್, ನಿಖಿತಾ ಸುತಾರ, ಕವಿತಾ ಗುರವ, ಭರಮಾ ಸುತಾರ, ಶೋಭಾ ನಂದ್ಯಾಳಿ ಮುಂತಾದವರು ಉಪಸ್ಥಿತರಿದ್ದರು.
​ 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button