Latest

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಮತ್ತೊಂದು ಟ್ವಿಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳುರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಯುವತಿ ಎಸ್ ಐಟಿ ತನಿಖೆ ರದ್ದುಪಡಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾಗಿ ತಿಳಿದುಬಂದಿದೆ.

ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಪ್ರಶ್ನಿಸಿ ಯುವತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ತನಿಖೆಗೆ ಹೊಸ ತಂಡ ರಚಿಸುವಂತೆ ಹಾಗೂ ಈವರೆಗಿನ ಎಸ್ ಐಟಿ ತನಿಖೆ ಪರಿಗಣಿಸದಂತೆ ಮನವಿ ಮಾಡಿದ್ದಾಳೆ.

Home add -Advt

ಈ ಹಿನ್ನೆಲೆಯಲ್ಲಿ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಿಂದ ಎಸ್ ಐಟಿ, ಸರ್ಕಾರ, ಹಾಗೂ ಪೊಲೀಸ್ ಆಯುಕ್ತರಿಗೆ ನೊಟೀಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಸಿಡಿ ಪ್ರಕರಣದ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ಕೂಡ ಇಂದು ಹೊರಬೀಳಲಿದೆ.
ಸಿಇಟಿಗೆ ದಿನಾಂಕ ನಿಗದಿ

Related Articles

Back to top button