ಒಂದೇ ದಿನ 3 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ
ಕಳೆದ ಒಂದು ವಾರದಿಂದ ಪ್ರತಿನಿತ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಬುಧವಾರ ಒಂದೇ ದಿನ 3 ಕೋಟಿ ರೂ.ಗಳಿಗಿಂತಲೂ ಹೆಚ್ಚು ವೆಚ್ಚದ ಕಾಮಗಾರಿಗಳಿಗೆ ಹಸಿರು ನಿಶಾನೆ ತೋರಿದರು.
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಕಾಲೇಜು ಕಟ್ಟಡ ಉದ್ಘಾಟಿಸಿದ ಬೆನ್ನಲ್ಲೇ ಹಿರೇಬಾಗೇವಾಡಿ ಮತ್ತು ನಾಗೇನಹಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕಳೆದ ಒಂದು ವಾರದಿಂದ ಪ್ರತಿನಿತ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಬುಧವಾರ ಒಂದೇ ದಿನ 3 ಕೋಟಿ ರೂ.ಗಳಿಗಿಂತಲೂ ಹೆಚ್ಚು ವೆಚ್ಚದ ಕಾಮಗಾರಿಗಳಿಗೆ ಹಸಿರು ನಿಶಾನೆ ತೋರಿದರು.
ಬೆಳಗ್ಗೆ ಹಿರೇಬಾಗೇವಾಡಿಯಲ್ಲಿ 1.50 ಕೋಟಿ ರೂ. ವೆಚ್ಚದ ಕಾಲೇಜು ಕಟ್ಟಡವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದ್ದರು.
ಇದಾದ ನಂತರ, ಹಿರೇಬಾಗೇವಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಬಜಾರ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಪೂಜೆ ನೆರವೇರಿಸಲಾಯಿತು.
ಕರ್ನಾಟಕ ನೀರಾವರಿ ನಿಗಮದ ವತಿಯಿಂದ 1.5 ಕೋಟಿ ರೂ,ಗಳ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ಜೊತೆಯಾಗಿ ಪೂಜೆ ಸಲ್ಲಿಸಿದರು.
ಈ ರಸ್ತೆ ಗ್ರಾಮದ ವೀರರಾಣಿ ಚೆನ್ನಮ್ಮ ಸರ್ಕಲ್ ನಿಂದ ಬಜಾರ ಮುಕ್ತಾಯದವರೆಗೆ (ಅಗಸಿ) ನಿರ್ಮಾಣವಾಗಲಿದೆ.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸಿ ಸಿ ಪಾಟೀಲ, ಅಡಿವೇಶ ಇಟಗಿ, ಬಿ ಎನ್ ಪಾಟೀಲ, ಸಮೀನ ನದಾಫ್, ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಸ್ವಾತಿ ಇಟಗಿ, ಉಪಾಧ್ಯಕ್ಷರಾದ ನಾಜರಿನ್ ಕರಿದಾವಲ್, ಸೈಯ್ಯದ್ ಅಲ್ಲಾಹುದ್ದಿನ ಖಾದ್ರಿ, ಸಂಜಯ ದೇಸಾಯಿ, ಶ್ರೀಕಾಂತ, ಉಳವಪ್ಪ ರೊಟ್ಟಿ, ಗೌಸ್ ಜಾಲಿಕೊಪ್ಪ, ಬಸವರಾಜ ತೋಟಗಿ, ಸುರೇಶ ಇಟಗಿ, ನಿಂಗಪ್ಪ ತಳವಾರ, ಬಸನಗೌಡ ಪಾಟೀಲ, ಗೌರಮ್ಮ ಪಾಟೀಲ, ಕಾಲೇಜಿನ ಸಿಬ್ಬಂದಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದಾದ ನಂತರ ನಾಗೇನಹಟ್ಟಿ ಗ್ರಾಮದಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 10 ಲಕ್ಷ ರೂ,ಗಳ ವೆಚ್ಚದಲ್ಲಿ ಸಿಸಿ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಲಕ್ಷ್ಮಿ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಸಂಜು ಮಾದರ್, ಪರುಶರಾಮ ಕೋಲಕಾರ, ನಿಂಗವ್ವ ಕುರುಬರ, ನಾರಾಯಣ ಪಾಟೀಲ, ಯಲ್ಲಪ್ಪ ಹಗೆದಾಳ, ಶಶಿ ಪಾಟೀಲ, ನಾಮದೇವ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ