ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯ ಸರಸ್ವತಿ ನಗರದ ಫ್ರೀಡಂ ಪೈಟರ್ಸ್ ಕಾಲೋನಿಯ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸಿ ಚಾಲನೆಯನ್ನು ನೀಡಿದರು.
ಶಾಸಕರ ಅನುದಾನದಲ್ಲಿ ಈ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಅವರು ಗುತ್ತಿಗೆದಾರರರಿಗೆ ಸೂಚಿಸಿದರು. ಕ್ಷೇತ್ರದಲ್ಲಿ ಕಳೆದ 5 ವರ್ಷದಲ್ಲಿ ಸಾವಿರಾರು ಕೋಟಿ ರೂ.ಗಳ ಕಾಮಗಾರಿ ಮಾಡಿಸಲಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬೆಂಬಲಿಸುವ ಮೂಲಕ ರಾಜ್ಯದಲ್ಲೇ ಅತ್ಯಧಿಕ ಅಂತರದಿಂದ ಗೆಲುವು ಸಾಧಿಸಲು ಅವಕಾಶ ಮಾಡಿಕೊಡಬೇಕು ಎಂದು ಹೆಬ್ಬಾಳಕರ್ ಮನವಿ ಮಾಡಿದರು.
ನಂತರ ಬೆನಕನಹಳ್ಳಿಯ ಸಂಭಾಜಿ ನಗರದಲ್ಲಿ ನೂತನ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸಹ ಅವರು ಭೂಮಿ ಪೂಜೆಯನ್ನು ಕೈಗೊಂಡು ಚಾಲನೆಯನ್ನು ನೀಡಿದರು.
ಈ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಅನುದಾನ ಬಿಡುಗಡೆಯಾಗಿದ್ದು, ತ್ವರಿತಗತಿಯಲ್ಲಿ ಗುಣಮಟ್ಟದ ಚರಂಡಿ ನಿರ್ಮಾಣ ಮಾಡುವಂತೆ ಶಾಸಕರು ಸೂಚಿಸಿದರು.
ಈ ಸಮಯದಲ್ಲಿ ಸ್ಥಳೀಯ ನಿವಾಸಿಗಳು, ಮಹೇಶ ಕೋಲಕಾರ, ಮೋಹನ ಸಾಂಬ್ರೇಕರ್, ಬಿಕಾಜಿ ಬೋಸಲೆ, ಸಂತೋಷ ನಾಯ್ಕ, ಡಾ. ತುಷಾರ್ ಪಾಟೀಲ, ಸಾಗರ ಲಾಖೆ, ಶಾಹು ಪಾಟೀಲ, ಲಕ್ಷ್ಮಣ ಪಕ್ರೆ, ರವಿ ಕಲಾಪತ್ರಿ, ಅಂಜನಾ ನಾಯ್ಕ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
https://pragati.taskdun.com/gain-strength-through-sports-and-herald-the-building-of-a-strong-nation-lakshmi-hebbalkara/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ