
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರಳೀಕಟ್ಟಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಹೆಚ್ಚುವರಿ ಕೊಠಡಿಗಳನ್ನು ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಸೋಮವಾರ ಭೂಮಿ ಪೂಜೆಯನ್ನು ನೆರವೇರಿಸಿದ ನಿರ್ಮಾಣದ ಕಾಮಗಾರಿಗೆ ಚಾಲನೆಯನ್ನು ನೀಡಿದರು.
ಇದೇ ವೇಳೆ ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ಕೆಲಹೊತ್ತು ಕಳೆದ ಹೆಬ್ಬಾಳಕರ್, ಮಕ್ಕಳ ಭವಿಷ್ಯಕ್ಕೆ ಶುಭ ಹಾರೈಸಿದರು.
ಈ ಸಮಯದಲ್ಲಿ ಶಿವಮೂರ್ತಿ ಮಹಾಸ್ವಾಮಿಗಳು, ಗ್ರಾಮದ ಹಿರಿಯರು, ಸಿ ಸಿ ಪಾಟೀಲ, ಸ್ಥಳೀಯ ಜನಪ್ರತಿನಿಧಿಗಳು, ಜಗದೀಶ ಯಳ್ಳೂರ, ಅಡಿವೇಶ ಇಟಗಿ, ಶ್ರೀಕಾಂತ ಮದುಭರಮಣ್ಣವರ, ಸಿದ್ದಣ್ಣ ಸಿಂಗಾಡಿ, ಸುರೇಶ ಇಟಗಿ, ರಮೇಶ ತಿಗಡಿ, ಎಸ್ ಡಿ ಎಮ್ ಸಿ ಅಧ್ಯಕ್ಷರು ಉಪಾಧ್ಯಕ್ಷರು, ಶಿವಾನಂದ ಹಲಕರ್ಣಿಮಠ್, ಐ ಬಿ ಕಲ್ಯಾಣಿ, ಎಚ್ ವಿ ಕರಲಿಂಗಣ್ಣವರ, ಗುರಪ್ಪ ಹೆಬ್ಬಾಳಕರ್, ಎಸ್ ಬಿ ಪಾರ್ವತಿ, ಹೊಳೆಬಸಪ್ಪ ಕರಲಿಂಗಣ್ಣವರ, ಪೂಜಾರ ಗುರುಗಳು, ರಾಜು ಉಪ್ಪಾರ, ಶಾಲಾ ಸಿಬಂದಿಯವರು, ಶಾಲಾ ಮಕ್ಕಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
https://pragati.taskdun.com/politics/mlc-channaraj-hattiholiinauguratessmart-class-and-additional-class-roomsmavinakatti-school/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ