Kannada NewsLatest
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ- ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ; ಕುತೂಹಲ ಮೂಡಿಸಿದ ಚರ್ಚೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ತೆರಳಿ ಚರ್ಚಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಮಾಜಿ ಸಿಎಂ ಭೇಟಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಸಮಾಜದ ಹಿರಿಯ ಮುಖಂಡರಾದ ಯಡಿಯೂರಪ್ಪ ಅವರ ನಿವಾಸಕ್ಕೆ ಸೌಹಾರ್ದಯುತ ಭೇಟಿಯನ್ನು ಕೊಟ್ಟು ಕುಶಲೋಪರಿ ವಿಚಾರಿಸಿದ್ದೇನೆ ಎಂದರು.
ಭೇಟಿ ಸಂದರ್ಭದಲ್ಲಿ ಅವರ ಮಾರ್ಗದರ್ಶನ ಹಾಗೂ ಸಮಾಜದ ಬೆಳವಣೆಗೆಯ ಕುರಿತು ಸುಧೀರ್ಘ ಕಾಲ ಚರ್ಚಿಸಲಾಯಿತು. ಈ ಸಮಯದಲ್ಲಿ ಪುತ್ರ ಮೃಣಾಲ ಹೆಬ್ಬಾಳ್ಕರ್ ಅವರ ಭವಿಷ್ಯ ಉಜ್ವಲವಾಗಿರಲೆಂದು ಯಡಿಯೂರಪ್ಪನವರು ಶುಭ ಹಾರೈಸಿದರು ಎಂದು ತಿಳಿಸಿದ್ದಾರೆ.
ಶ್ರೀಲಂಕಾ: ತುರ್ತು ಪರಿಸ್ಥಿತಿ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ