https://youtu.be/S9UNwJqCxVw
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆರ್ ಟಿಜಿಎಸ್ ಮೂಲಕ ಹಣವನ್ನು ಅವರು ವರ್ಗಾಯಿಸಿದ್ದಾರೆ.
ಕೊರೋನಾ ವೈರಸ್ ಹರಡುತ್ತಿರುವ ಇಂದಿನ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ತಮ್ಮ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಿದ್ದಾರೆ. ಜನರು ಮನೆಯಲ್ಲೇ ಇದ್ದುಕೊಂಡು ತಮ್ಮ ಸಹಕಾರ ನೀಡಬೇಕು. ನಮಗಾಗಿ ತಮ್ಮ ಜೀವವನ್ನೇ ಪಣವಾಗಿಟ್ಟು ಕೆಲಸ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು, ಪೊಲೀಸರು, ಮಿಲ್ಟ್ರಿ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ನಾವು ಕೃತಜ್ಞರಾಗಿರೋಣ. ಇಂತಹ ಸಂಕಷ್ಟದಿಂದ ಪಾರುಮಾಡುವಂತೆ ಎಲ್ಲರ ಪರವಾಗಿ ನಾನೂ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.
ಜನರು ತಾಳ್ಮೆಯಿಂದಿದ್ದು ತಮ್ಮ, ತಮ್ಮ ಕುಟುಂಬದ, ಸಮಾಜದ ಆರೋಗ್ಯ ಕಾಪಾಡಿಕೊಳ್ಳಬೇಕು. ಈಗ ಎಚ್ಚರದಿಂದಿದ್ದರೆ ಮುಂದೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಅವರು ಅಭಯ ನೀಡಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಯುವರಾಜ ಕದಂ, ಅಶೋಕ ತೋರ್ಲೆ, ರಾಜು ಮೇಳೆದ್, ಗಂಗಣ್ಣ ಕಲ್ಲೂರ, ಮನೋಹರ ಬೆಳಗಾಂವಕರ್ ಮೊದಲಾದವರು ಈ ಸಂದರ್ಭದಲ್ಲಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ