
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಜಗತ್ತು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದಂತೆ ಅದಕ್ಕೆ ಪೂರಕವಾಗಿ ನಾವೂ ನಮ್ಮನ್ನು ಹೊಂದಿಸಿಕೊಳ್ಳಬೇಕಾದುದು ಅನಿವಾರ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೂ ಸ್ಮಾರ್ಟ್ ವ್ಯವಸ್ಥೆ ಮೂಲಕ ಶಿಕ್ಷಣ ಒದಗಿಸಲು ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿಂಡಲಗಾ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹಣ ಮಂಜೂರು ಮಾಡಿಸಿದ ಅನುದಾನದಲ್ಲಿ ನಿರ್ಮಿಸಲಾದ ನೂತನ ಸ್ಮಾರ್ಟ್ ಕ್ಲಾಸ್ ಸೇವೆ ಉದ್ಘಾಟಿಸಿ ಅವರು ಮಾತನಾಡಿದರು.
“ಸ್ಮಾರ್ಟ್ ಕ್ಲಾಸ್ ಸೇವೆಯಲ್ಲಿ ಪ್ರೊಜೆಕ್ಟರ್, ಎಸಿ, ಬೆಂಚ್, ಯುಪಿಎಸ್ ಮತ್ತು ಇನವರ್ಟರ್, ಕಂಪ್ಯೂಟರ್, ಪ್ರಿಂಟರ್, ಟ್ಯಾಬ್, ಸ್ಮಾರ್ಟ್ ಕ್ಯಾಬಿನೆಟ್, ಪೋಡಿಯಮ್, ವಿಂಡೋ ಕರ್ಟನ್ಸ್, ಡೋರ್, ಮ್ಯಾಟ್ಸ್, ಡಿಜಿಟಲ್ ಕಂಟೆಂಟ್, ಎಲೆಕ್ಟ್ರಿಶಿಯನ್, ವಾಲ್ ಕ್ಲಾಕ್, ನೇಮ್ ಪ್ಲೇಟ್, ಪೇಂಟಿಂಗ್, ಟೈಲ್ಸ್ ಹಾಗೂ ಮುಂತಾದ ಸಾಮಗ್ರಿಗಳನ್ನು ಅಳವಡಿಸಲಾಗಿದೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ಗುರಿ ಸಾಧಿಸಬೇಕು” ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ, ಗ್ರಾಮ ಪಂಚಾಯಿತಿ ಸದಸ್ಯ ರಾಹುಲ್ ಉರಣಕರ್, ಎಸ್.ಡಿ.ಎಂ.ಸಿ. ಸದಸ್ಯರು, ವಿಠ್ಠಲ ದೇಸಾಯಿ, ಚೇತನಾ ಅಗಸ್ಗೇಕರ್, ಸೀಮಾ ದೇವಕರ್, ಅಶೋಕ ಕಾಂಬಳೆ, ಗಜಾನಂದ ಕಾಕತ್ಕರ್, ಸಂತೋಷ ಫರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ