Kannada NewsKarnataka NewsLatest

ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಂಡ ಶಾಸಕಿ; ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

  
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮನೆ ಕುಸಿತದಿಂದ ಸಂಭವಿಸಿರುವ ಈ ಅನಾಹುತ ದುರದೃಷ್ಟಕರ, ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದು ನನಗೆ ಬಹಳ ದುಃಖ ತಂದಿದೆ, ನಾನು ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ  ಎಂದು ಸಿಎಂ ತಿಳಿಸಿದ್ದಾರೆ.
ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರುಪಾಯಿ ಪರಿಹಾರ ನೀಡಲಾಗಿವುದು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದೇನೆ.
ತಕ್ಷಣ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿ ಡಿಸಿ ಎಂ‌ಜಿ‌ ಹಿರೇಮಠ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,  ತಕ್ಷಣ ಪರಿಹಾರ ಕ್ರಮಕ್ಕೆ ಸೂಚನೆ ನೀಡಿದರು.
ಈ ದುರಂತದಲ್ಲಿ ಬದುಕುಳಿದ ವ್ಯಕ್ತಿ ಭೀಮಪ್ಪನ ಜೊತೆ ದೂರವಾಣಿ ಮೂಲಕ  ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರ ನಿನ್ನ ಜೊತೆಗಿರುತ್ತದೆ.  ಮೃತಪಟ್ಟಿರುವವರ ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ತಕ್ಷಣವೇ ಪರಿಹಾರದ ಹಣವನ್ನು ತಲುಪಿಸಲಾಗುವುದು, ಯಾವುದೇ ಕಾರಣಕ್ಕೂ ದೃತಿಗೆಡಬೇಡ
 ಎಂದು  ಅಭಯ ನೀಡಿದ್ದಾರೆ.

ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಘಟನೆ ನಡೆದ ಸುದ್ದಿ ಕೇಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ರಕ್ಷಣಾ ಕಾರ್ಯದ ಉಸ್ತುವಾರಿ ನೋಡಿಕೊಂಡರು.
 ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಬಡಾಲ ಅಂಕಲಗಿಯ ಖನಗಾವಿ ಎನ್ನುವರಿಗೆ ಸೇರಿದ್ದ ಮನೆಯ ಗೋಡೆ ಕುಸಿದಿದ್ದರ ಪರಿಣಾಮ ಮನೆಯ ಒಳಗಡೆಯಿದ್ದ 7 ಜನರ ಪೈಕಿ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರನ್ನು ಆಸ್ಪತೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟಿರುವುದು ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ, ನಿಜಕ್ಕೂ ವಿಧಿ ಎಷ್ಟು ಕ್ರೂರಿ ಎನಿಸುತ್ತಿದೆ ಎಂದು ಹೆಬ್ಬಾಳಕರ್ ತಿಳಿಸಿದರು.
ಮೃತರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ, ಅಗಲಿದ ಆತ್ಮಗಳಿಗೆ ಭಗವಂತ ಶಾಂತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಸದ್ಯ ಘಟನೆಯ ಸ್ಥಳದಲ್ಲಿ ತಹಸಿಲ್ದಾರ, ಜಿಲ್ಲಾಧಿಕಾರಿಗಳು, ಸಿಪಿಆಯ್ ಹಾಗೂ ಮುಂತಾದ ಅಧಿಕಾರಿಗಳು ಹಾಜರಿದ್ದು, ಘಟನೆಯ ಕುರಿತು ಚರ್ಚಿಸಲಾಗುತ್ತಿದೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button