Kannada NewsKarnataka NewsLatest

ಪರಿಶಿಷ್ಟರ ಕಾಲೋನಿಯಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಣ್ಣೂರ ಗ್ರಾಮದ ಎಸ್ ಸಿ ಕಾಲೋನಿಯ ರಸ್ತೆಗಳ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರು ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಶುಕ್ರವಾರ  ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಕ್ಷೇತ್ರದಾದ್ಯಂತ ಮೂಲ ಸೌಕರ್ಯಗಳ ಅಭಿವೃದ್ಧಿ ಕಾರ್ಯವನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಹಮ್ಮಿಕೊಂಡು ಜನತೆಗೆ ಅನುಕೂಲಗಳನ್ನು ಕಲ್ಪಿಸಲಾಗಿದೆ.  ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದರು.

Home add -Advt

ಈ ಸಮಯದಲ್ಲಿ ಯುವರಾಜಣ್ಣ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ, ಸರಿತಾ ನಾಯ್ಕ್, ಸಚಿತಾ ಸಾಂಬ್ರೇಕರ್, ರಾಮ ಚೌಗುಲೆ, ಜಯವಂತ ಬಾಳೇಕುಂದ್ರಿ, ಜಯಶ್ರೀ ನಾಯ್ಕ್, ಕೃಷ್ಣ ದೇವರಮನಿ, ನಾರಾಯಣ ಶಹಾಪುರಕರ್, ಪದ್ಮರಾಜ ಪಾಟೀಲ, ಆಪ್ತ ಸಹಾಯಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಸ್ಪರ್ಧೆಗೆ ಆಪ್ತರಿಂದಲೇ ವಿರೋಧ; ಅಚ್ಚರಿಗೆ ಕಾರಣವಾಯ್ತು ಸಂತೋಷ ಲಾಡ್ ಹೇಳಿಕೆ

Related Articles

Back to top button