ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವ ಉಮೇಶ ಕತ್ತಿ ಅವರ ನಿಧನಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಚಿವ ಉಮೇಶ ಕತ್ತಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. ಅವರೊಬ್ಬ ಕ್ರಿಯಾಶೀಲ, ಮುತ್ಸದ್ದಿ ರಾಜಕೀಯ ನಾಯಕರಾಗಿದ್ದರು. ಸ್ವಭಾವದಲ್ಲೂ ಒಳ್ಳೆಯವರಾಗಿದ್ದ ಅವರ ನಿಧನದಿಂದ ಈ ನಾಡಿಗೆ, ರಾಜಕೀಯ ಹಾಗೂ ಸಹಕಾರ ಕ್ಷೇತ್ರಕ್ಕೆ ಅಪಾರ ಹಾನಿಯಾಗಿದೆ. ವಿವಿಧ ಸಚಿವ ಸ್ಥಾನಗಳನ್ನು ಸಮರ್ಥವಾಗಿ ನಿಭಾಯಿಸಿದ ಅವರು ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಉತ್ತಮ ಕೆಲಸಗಳನ್ನು ಮಾಡಿದ್ದು ಅವರಿಂದ ಅಪಾರ ಅಭಿವೃದ್ಧಿ ಕಾರ್ಯಗಳಾಗಿವೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.
ಹುಕ್ಕೇರಿ ಭಾಗದ ಜನಪ್ರಿಯ ನಾಯಕರಾಗಿದ್ದ ಆಹಾರ, ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವ ಉಮೇಶ ಕತ್ತಿ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ವಿವಿಧ ಸರಕಾರಗಳಲ್ಲಿ ನಾನಾ ಸಚಿವ ಸ್ಥಾನಗಳನ್ನು ಸಮರ್ಥವಾಗಿ ನಿಭಾಯಿಸಿರುವ ಉಮೇಶ ಕತ್ತಿ ಅವರು ಒಬ್ಬ ಸಹೃದಯಿ, ಕ್ರಿಯಾಶೀಲ ನಾಯಕರಾಗಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ.
ಬಡವರು, ರೈತರ ಪರ ಕಾಳಜಿಯ ಧೋರಣೆ ಹೊಂದಿದ್ದ ಅವರು ಸಹಕಾರ ಕ್ಷೇತ್ರದಲ್ಲಿ ಗೈದ ಕಾರ್ಯಗಳು ಸದಾ ಸ್ಮರಣೀಯವಾದುದು. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಅವರು ಕೋರಿದ್ದಾರೆ.
ಲಕ್ಷ್ಮೀ ಹೆಬ್ಬಾಳಕರ ಹಾಗೂ ಚನ್ನರಾಜ ಹಟ್ಟಿಹೊಳಿ ಅವರು ಟ್ವಿಟ್ಟರ್ ನಲ್ಲಿ ಸಂತಾಪ ಹಂಚಿಕೊಂಡಿದ್ದಾರೆ.
ಬೆಳಗಾವಿಗೆ ಪ್ರಯಾಣಿಸಿದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ