Latest

BJP ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಶಾಸಕ ರೇಣುಕಾಚಾರ್ಯ ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಕುಂಕುವಾ ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ್ ಕುಮಾರ್ ಎಂಬುವವರು ಶಾಸಕರ ವಿರುದ್ಧ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದಾವಣಗೆರೆಯ ಕೋಗನಹಳ್ಳಿಯಲ್ಲಿ ಹಾನಿಗೊಳಗಾದ ಮನೆಗಳ ಸರ್ವೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರು ತಾವು ಹೇಳಿದಂತೆ ಗ್ರೇಡ್ ಹಾಕಬೇಕು ಎಂದು ತಾಕೀತು ಮಾಡುತ್ತಿದ್ದಾರೆ. ವರದಿ ಬದಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೆ. ಇದಕ್ಕೆ ಶಾಸಕರು ಸಾರ್ವಜನಿಕವಾಗಿ ನಿಂದಿಸಿದ್ದರು ಎಂದು ಆರೋಪಿಸಿ ಪ್ರಶಾಂತ್ ಕುಮಾರ್ ದೂರು ನೀಡಿದ್ದು, ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಅಡಿಕೆ ಚುಕ್ಕೆ ರೋಗದ ನಿವಾರಣೆ ಹಾಗೂ ಹರಡಂತೆ ಕ್ರಮ ವಹಿಸಲು ಸರ್ಕಾರ ಸಿದ್ಧವಿದೆ: ಸಿಎಂ ಬೊಮ್ಮಾಯಿ ಭರವಸೆ

Home add -Advt

https://pragati.taskdun.com/adikechuke-rogacm-basavaraj-bommaikaduruchikkamagaluru/

Related Articles

Back to top button