Karnataka News

*ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ*

ಪ್ರಗತಿವಾಹಿನಿ ಸುದ್ದಿ : 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿ ನಂತರ ಕೊಲೆಗೈದ ಆರೋಪಿ ಬಿಹಾರಿ ಮೂಲದ ವ್ಯಕ್ತಿಯನ್ನು ಈಗಾಗಲೇ ಪೊಲೀಸರು ಎನ್ ಕೌಂಟರ್ ಮಾಡಿದ್ದು, ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

10 ಲಕ್ಷ ರೂ. ಪರಿಹಾರವಾಗಿ ನೀಡೋದಾಗಿ ಸರ್ಕಾರದ ಪರವಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯ ಅಧ್ಯಾಪಕ ನಗರದಲ್ಲಿ ಮನೆಯ ಮುಂದೆ ಗೇಟ್ ಬಳಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಹೊತ್ತೊಯ್ದಿದ್ದ ಆರೋಪಿ ಅಲ್ಲಿಂದ ಸ್ವಲ್ಪ ದೂರದಲ್ಲಿದ್ದ ಶೀಟ್ ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದ.

ಆರೋಪಿಯನ್ನು ಬಂಧಿಸಿ ಸ್ಥಳ ಮಹಜರು ಮಾಡುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ, ಈ ವೇಳೆ ತಮ್ಮ ರಕ್ಷಣೆಗಾಗಿ ಪೊಲೀಸರು ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಆರೋಪಿ ಮೃತ ಪಟ್ಟಿದ್ದಾನೆ.

Related Articles

Back to top button