Politics

*ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್, ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ್ದು, 2 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚಿಸಿದೆ. ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಮುನಿರತ್ನ ಕೆಲವೇ ಕ್ಷಣಗಳಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಮುನಿರತ್ನ ವಿರುದ್ಧ ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಜೈಲು ಸೇರಿದ್ದರು.

Home add -Advt

Related Articles

Back to top button