
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಯಾರೆಲ್ಲ ಸಚಿವರಾಗಲಿದ್ದಾರೆ ಎಂಬುದು ಇನ್ನೂ ಕುತೂಹಲಕ್ಕೆ ಕಾರಣವಾಗಿದೆ.
ಈ ನಡುವೆ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಶಾಸಕರು ಮಂತ್ರಿಗಿರಿಗಾಗಿ ಒತ್ತಡ ಹೇರುತ್ತಿದ್ದಾರೆ. ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಬೆಳ್ಳಿ ಪ್ರಕಾಶ್ ಅವರು ಯಡಿಯೂರಪ್ಪ ಕಾವೇರಿ ನಿವಾಸಕ್ಕೆ ದೌಡಾಯಿಸಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.
ಇದೇ ವೇಳೆ ಪರಣ್ಣ ಮುನವಳ್ಳಿ ಬೆಂಬಲಿಗರು ಕಾವೇರಿ ನಿವಾಸದ ಎದುರು ಬೀಡುಬಿಟ್ಟಿದ್ದು, ಮುನವಳ್ಳಿಗೆ ಸಚಿವ ಸ್ಥಾನ ನೀಡುವಂತೆ ಘೋಷಣೆಗಳನ್ನು ಕೂಗುತ್ತಿದ್ದಾರೆ. ಒಟ್ಟಾರೆ ಸಂಪುಟ ಸೇರಲು ಶಾಸಕರು ಕೊನೆ ಹಂತದ ಒತ್ತಡ ತಂತ್ರ ಅನುಸರಿಸಲು ಮುಂದಾಗಿದ್ದಾರೆ.
ನಾಳೆ ಸಂಜೆ ಹೈಕಮಾಂಡ್ ನಿಂದಲೇ ಮಂತ್ರಿಗಳ ಪಟ್ಟಿ ಬಿಡುಗಡೆ – ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ