Latest

ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣ: ತುಂಗಾ ಕಾಲುವೆಯಲ್ಲಿ ಕಾರು ಪತ್ತೆ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಕಾರು ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ರೇಣುಕಾಚಾರ್ಯ ಅವರ ಸಹೋದರ ಎಂ.ಪಿ.ರಮೇಶ್ ಅವರ ಮಗ ಚಂದ್ರಶೇಖರ್ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ದಾವಣಗೆರೆ ಜಿಲ್ಲಾ ಎಸ್ ಪಿ ರಿಷ್ಯಂತ್ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಿ ರಾಜ್ಯಾದ್ಯಂತ ಶೋಧ ನಡೆಸಲಾಗುತ್ತಿದೆ.

Home add -Advt

ಈ ನಡುವೆ ಚಂದ್ರಶೇಖರ್ ಅವರ ಕಾರು ತುಂಗಾ ಮುಖ್ಯ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ಕಡದಕಟ್ಟೆ ಬಳಿ ತುಂಗಾ ಮುಖ್ಯ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರೊಂದು ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಕ್ರೇನ್ ಮೂಲಕ ಕಾರನ್ನು ಮೇಲಕೆತ್ತಿದ್ದಾರೆ ಎಂದು ತಿಳಿದುಬಂದಿದೆ.

ಮುರುಘಾಶ್ರೀಗಳು ಮತ್ತೆ ಪೊಲೀಸ್ ಕಸ್ಟಡಿಗೆ

https://pragati.taskdun.com/latest/murughashree2nd-pocso-case3-days-police-custody/

Related Articles

Back to top button