Latest

ಆರೋಗ್ಯ ಸಚಿವರು ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ; ರೇಣುಕಾಚಾರ್ಯ ಆಗ್ರಹ  

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಆರೋಗ್ಯ ಸಚಿವ ಡಾ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ, ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ ಎಂದು ಹೇಳಿದ್ದಾರೆ.

ಚಾಮರಾಜನಗರ ದುರಂತ, ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ರೇಣುಕಾಚಾರ್ಯ, ಜನರ ಜೀವದ ಜೊತೆ ಚೆಲ್ಲಾಟವಾಡುವುದು ಪಕ್ಷಕ್ಕೆ ಮುಜುಗರವಾಗುತ್ತದೆ. ಎರಡೆರಡು ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಗೌರವದಿಂದ ಮನೆಗೆ ಹೋಗಲಿ ಎಂದರು.

ಕೆಲ ಸಚಿವರು ತಮ್ಮ ಸ್ವಂತ ಕೆಲಸದಲ್ಲಿ, ಐಷಾರಾಮಿ ಜೀವನದಲ್ಲಿ ಬ್ಯುಸಿಯಾಗಿದ್ದಾರೆ ಹೊರತು ಜನರ ರಕ್ಷಣೆ ಮಾಡಲು ಮುಂದಾಗುತ್ತಿಲ್ಲ. ಈ ರೀತಿ ಕೆಲಸ ಮಾಡಲೆಂದೇ ಇವರು ಎರಡೆರಡು ಖಾತೆ ಪಡೆದುಕೊಂಡಿದ್ದು? ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಹಲಗು ರಾತ್ರಿಯೆನ್ನದೇ ಕೆಲಸ ಮಾಡುತ್ತಿದ್ದಾರೆ. ಸಚಿವರುಗಳಿಗೆ ಏನಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಚಾಮರಾಜನಗರ ದುರಂತ; ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಕ

Related Articles

Back to top button