ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷದ ನಾಯಕರು ಭಾರಿ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆಯ ಕೆಟಿಜೆ ನಗರದಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಎಸ್ ಎಸ್ & SSM ಅಭಿಮಾನಿಗಳ ಹೆಸರಲ್ಲಿ ಜನರಿಗೆ ಗಿಫ್ಟ್ ಹಂಚಲಾಗುತ್ತಿತ್ತು. ಈ ವೇಳೆ ಪೊಲೀಸರು ನಡೆಸಿದ ದಾಳಿಯಲ್ಲಿ 7.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.
ಈ ಹಿನ್ನೆಲೆಯಲ್ಲಿ ಕೆಟಿಜೆ ನಗರದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ