ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಹಾಗೂ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿಯೇ ನಡೆದಿದೆ.
ರಾಜಭವನ ಚಲೋ ಹಿನ್ನೆಲೆಯಲ್ಲಿ ರೈತರೊಂದಿಗೆ ರಾಜಭವನದತ್ತ ಆಗಮಿಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ತಡೆದ ಪೊಲೀಸರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ತಮ್ಮನ್ನು ವಶಕ್ಕೆ ಪಡೆಯಲು ಮುಂದಾದ ಲೇಡಿ ಕಾನ್ಸ್ ಟೇಬಲ್ ಮೇಲೆಯೇ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ರಾಜಭವನಕ್ಕೆ ತೆರಳಲೆಂದು ಸಾಗರೋಪಾದಿಯಲ್ಲಿ ಬರುತ್ತಿದ್ದ ಕಾಂಗ್ರೆಸ್ ನಾಯಕರು ಹಾಗೂ ರೈತರನ್ನು ಹಂತ ಹಂತವಾಗಿ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ಗಳಲ್ಲಿ ಕರೆದೊಯ್ದಿದ್ದಾರೆ. ಇದೇ ವೇಳೆ ಲೇಡಿ ಕಾನ್ಸ್ ಟೇಬಲ್ ಗಳು ಶಾಸಕಿಯರನ್ನು ತಡೆದು ಬಲವಂತದಿಂದ ಬಸ್ ಗೆ ಹತ್ತಿಸಲು ಮುಂದಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಸೌಮ್ಯಾ ರೆಡ್ಡಿ, ಲೇಡಿ ಕಾನ್ಸ್ ಟೇಬಲ್ ಕೈಗೆ ಬಾರಿಸಿದರು ಎಂದು ದೂರಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ