Belagavi NewsBelgaum NewsPolitics

*ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ನಮ್ಮ ಬೆಂಬಲ ಎಂದ ಬಿಜೆಪಿ ಶಾಸಕ*

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅನುಕೂಲ

ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ನಮಗೆ ಸಂತೋಷವಾಗುತ್ತದೆ ಎಂದು ಖಾನಾಪುರ ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ ಹೇಳಿದರು.


ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಪಕ್ಷದಿಂದ ಯಾರೂ ಬೆಂಬಲ ಕೊಡುವುದಿಲ್ಲ. ವೈಯಕ್ತಿಕವಾಗಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆದರೆ ನಮ್ಮ ಬೆಂಬಲ ಇದ್ದೆ ಇರುತ್ತದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದರು.


ಬಿಜೆಪಿ ಸರಕಾರದಲ್ಲಿಯೇ ಖಾನಾಪುರ ತಾಲೂಕಾ ಆಸ್ಪತ್ರೆ ನಿರ್ಮಾಣವಾಗಿತ್ತು. ಕೆಲ ಮೂಲಭೂತ ಸೌಕರ್ಯ ಕಲ್ಪಿಸಿ ಈಗ ಜನರ ಅನುಕೂಲಕ್ಕೆ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದರು.

Home add -Advt


ಖಾನಾಪುರ ತಾಲೂಕಿನಲ್ಲಿ ಕಳೆದ ನಾಲ್ಕು‌ ತಿಂಗಳಲ್ಲಿ ಸತತವಾಗಿ ಮಳೆಯಾಗುತ್ತಿದೆ‌. ಇದರಿಂದ ಚೋರ್ಲಾ ರಸ್ತೆ ಹಾಳಾಗಿದೆ. ಬೇಸಿಗೆ ಕಾಲದಲ್ಲಿ ಅದನ್ನು ದುರಸ್ತಿ ಮಾಡಿಸಲಾಗುವುದು ಎಂದರು.

Related Articles

Back to top button