Latest

ಬಲಿಯಾದವರು ಅಮಾಯಕರಂತೆ: ಜಮೀರ್ ಅಹ್ಮದ್ ಊವಾಚ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದ ಬಗ್ಗೆ ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ಬೆಂಕಿ ಹಚ್ಚಿದವರು ಕಿಡಿಗೇಡಿಗಳು, ಬಲಿಯಾದವರು ಇನ್ಯಾರೋ.. ನಮ್ಮ ನೋವು ಆಕ್ರೋಶಗಳನ್ನು ಕಾನೂನು ಹೋರಾಟದ ಮೂಲಕ ತೋರಿಸಬೇಕೇ ವಿನ: ಅಶಾಂತಿಯಿಂದಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜಮೀರ್ ಅಹ್ಮದ್, ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದಿದ್ದಾರೆ.

Related Articles

ಗೋಲಿಬಾರ್ ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ.

ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

Home add -Advt

Related Articles

Back to top button