ಕೆಎಸ್ಆರ್‌ಟಿಸಿ ಬಸ್ ಚಲಾಯಿಸಿ ಗಮನ ಸೆಳೆದ ಶಾಸಕ ರೇಣುಕಾಚಾರ್ಯ; ಆದ್ರೆ ನೋಟಿಸ್ ಬಂದಿದ್ದು ಯಾರಿಗೆ ಗೊತ್ತಾ?

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಎರಡು ದಿನಗಳ ಹಿಂದೆ ಕೆಎಸ್ಆರ್‌ಟಿಸಿ ಬಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸ್ವತ: ತಾವೇ ಬಸ್ ಡ್ರೈವರ್ ಸೀಟಲ್ಲಿ ಕುಳಿತು ಬರೋಬ್ಬರಿ 60 ಕಿ.ಮೀ ಬಸ್ ಚಲಾಯಿಸಿ ಗಮನಸೆಳೆದಿದ್ದರು.

ಗೊಲ್ಲರಹಳ್ಳಿ, ಬೆನಕಹಳ್ಳಿ, ಉಜ್ಜನಿಪುರ, ರಾಂಪುರ, ಸಾಸ್ವೇಹಳ್ಳಿ ಗ್ರಾಮಗಳ ಮಾರ್ಗವಾಗಿ ಹೊಸದಾಗಿ ಕೆಎಸ್ಆರ್‌ಟಿಸಿ ಬಸ್ ಚಾಲನೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ರೇಣುಕಾಚಾರ್ಯ ಸ್ವತ: ತಾವೇ ಚಾಲಕನ ಯೂನಿಫಾರಂ ಹಾಕಿಕೊಂಡು ಗ್ರಾಮಗಳಿಗೆ ಬಸ್ ಚಲಾಯಿಸಿಕೊಂಡು ಹೋಗಿದ್ದರು.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತಲ್ಲದೇ ಚರ್ಚೆಗೂ ಗ್ರಾಸವಾಗಿತ್ತು. ಇದೀಗ ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಡಿಸಿ ಟಿ ಆರ್ ನವೀನ್ ಕುಮಾರ್ ಘಟನೆಯ ಬಗ್ಗೆ ಹೊನ್ನಾಳಿ ಡಿಪೋ ವ್ಯವಸ್ಥಾಪಕ ಮಹೇಶ್ವರಪ್ಪರಿಗೆ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದ್ದಾರೆ.

ರೇಣುಕಾಚಾರ್ಯ ಅವರು ಚಾಲಕನ ಸಮವಸ್ತ್ರ ಧರಿಸಿ ಸುಮಾರು 60 ಕಿ.ಮೀ ಬಸ್ ಓಡಿಸಿದ್ದರು. ಕೆಎಸ್ಆರ್‌ಟಿಸಿ ಬಸ್ ಗಳನ್ನು ಕೇವಲ ನಿಗಮದ ಚಾಲಕರು ಹಾಗೂ ಇಲಾಖೆಯ ಪರವಾನಿಗೆ ಪಡೆದವರು ಮಾತ್ರ ಚಲಾಯಿಸಬೇಕು ಎಂಬ ನಿಯಮವಿದೆ. ಆದರೆ ನಿಯಮ ಉಲ್ಲಂಘಿಸಿ ಶಾಸಕರು ಪ್ರಯಾಣಿಕರನ್ನು ಕೂರಿಸಿಕೊಂಡು ಬಸ್ ಚಲಾಯಿಸಿರುವುದಕ್ಕೆ ವಿವರಣೆ ನೀಡುವಂತೆ ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿ ನೋಟಿಸ್ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button