
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿ ಸುವರ್ಣ ವಿಧಾನಸೌಧದ ಸಮೀಪ ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಬೆಂಬಲ ಸೂಚಿಸಿದ್ದಲ್ಲದೆ, ಅವರಿಗೆ ಧ್ವನಿಯಾಗುವ ಭರವಸೆ ನೀಡಿದರು.
ಕೊಂಡಸ್ಕೊಪ್ಪ ಹಾಗೂ ಬಸ್ತವಾಡ ಬಳಿ ನಿರ್ಮಿಸಲಾಗಿರುವ ಪ್ರತಿಭಟನಾ ಕ್ಯಾಂಪ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ಸತ್ಯಾಗ್ರಹ ನಡೆಸುತ್ತಿವೆ. ಅಲ್ಲಿಗೆ ತೆರಳಿದ ಹೆಬ್ಬಾಳಕರ್ ಹಾಗೂ ಜಾರಕಿಹೊಳಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ ಬೆಂಬಲ ಸೂಚಿಸಿದರು. ಅವರ ಬೇಡಿಕೆಗಳಿಗೆ ಸ್ಪಂದಿಸಿ, ಸರ್ಕಾರದ ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
*ಕೊಟ್ಟ ಮಾತು ತಪ್ಪಿದ ರಾಜ್ಯ ಸರ್ಕಾರ; ಪಾದಯಾತ್ರೆ ಆರಂಭ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ*
https://pragati.taskdun.com/belagavi2a-reservationpanchamasalijayamrutyunjaya-swamiji/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ