Kannada NewsKarnataka NewsLatestPolitics

*ಅಧಿಕಾರ ಹಸ್ತಾಂತರದ ಚರ್ಚೆ ನಡುವೆಯೇ ವಿದೇಶ ಪ್ರವಾಸಕ್ಕೆ ತೆರಳಿದ 11 ಶಾಸಕರು*

ಫಾರಿನ್ ಟ್ರಿಪ್ ಗೆ ಹೋದ ಶಾಕರು ಯಾರು?

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರದ ಚರ್ಚೆ ನಡುವೆಯೇ ಕಾಂಗ್ರೆಸ್ ನ 11 ಶಾಸಕರು ವಿದೇಶ ಪ್ರವಾಸಕ್ಕೆ ತೆರಳಿದ್ದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ 11 ಶಾಸಕರು ವಿದೇಶ ಪ್ರವಾಸಕ್ಕೆ ತೆರಳಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಬಣದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್​ಸಿಗಳು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕರು, ಇದು ವೈಯಕ್ತಿಕ ಪ್ರವಾಸ. ನಮ್ಮ ಸ್ವಂತ ಖರ್ಚಿನಿಂದ ಕುಟುಂಬ ಸಮೇತ ಹೋಗುತ್ತಿದ್ದೇವೆ. ಇದರಲ್ಲಿ ಯಾವುದೇ ಬಣ ರಾಜಕೀಯವೂ ಇಲ, ವಿಶೇಷತೆಯೂ ಇಲ್ಲ ಎಂದು ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಗೆ ಶಾಸಕರು ಪ್ರವಾಸ ಹೋಗಿದ್ದು, ಮಾರ್ಚ್ 1ರವರೆಗೆ ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ.

ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಶಾಸಕರ ಪಟ್ಟಿ:
ದೇವೇಂದ್ರಪ್ಪ, ಜಗಳೂರು ಶಾಸಕ
ಹೆಚ್.ಡಿ ತಮ್ಮಯ್ಯ, ಚಿಕ್ಕಮಗಳೂರು ಶಾಸಕ
ಹಂಪನಗೌಡ ಬಾದರ್ಲಿ, ಸಿಂಧನೂರು ಶಾಸಕ
ಪುಟ್ಟರಂಗಶೆಟ್ಟಿ, ಚಾಮರಾಜನಗರ ಶಾಸಕ
ಬಿ.ಎಂ ನಾಗರಾಜ್, ಸಿರಗುಪ್ಪ ಶಾಸಕ
ಯಶವಂತರಾಯಗೌಡ ಪಾಟೀಲ, ಇಂಡಿ ಶಾಸಕ
ಎಸ್.ಎಸ್. ಮಲ್ಲಿಕಾರ್ಜುನ್, ಸಚಿವ
ಶರಣಗೌಡ ಬಯ್ಯಾಪುರ, ಎಂಎಲ್​ಸಿ
ವಸಂತ್ ಕುಮಾರ್, ಎಂಎಲ್​ಸಿ
ನಾಗರಾಜ್ ಯಾದವ್, ಎಂಎಲ್​ಸಿ
ಡಾ. ಡಿ. ತಿಮಯ್ಯ, ಎಂಎಲ್​ಸಿ


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button