
ಪ್ರಗತಿವಾಹಿನಿ ಸುದ್ದಿ: ಚುನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಯೋಗೇಶ್ವರ್ ಗೆ ಬಿಜೆಪಿ ನಾಯಕರು ಬೆಂಬಲ ನೀಡಿಲ್ಲ ಎನ್ನಲಾಗಿದೆ. ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಇನ್ನೊಂದೆಡೆ ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಕರೆತರಲು ಕಾಂಗ್ರೆಸ್ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದರಾ ಕಾದುನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ