
ಯೋಜನೆಗೆ 1.23 ಕೋಟಿ ರೂ. ಬಿಡುಗಡೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಡಿಗೇರಿ ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಇಡೀ ಕ್ಷೇತ್ರದಲ್ಲಿ ನೀರು, ಶಿಕ್ಷಣ, ರಸ್ತೆಯಂತಹ ಮೂಲಭೂತ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುತ್ತಿದೆ. ಲಕ್ಷ್ಮಿ ಹೆಬ್ಬಾಳಕರ್ ಶಾಸಕರಾಗಿ ಆಯ್ಕೆಯಾದ ನಂತರ ಸಾವಿರಾರು ಕೋಟಿ ರೂ. ಯೋಜನೆಯನ್ನು ತಂದಿದ್ದು, ಕ್ಷೇತ್ರದ ಎಲ್ಲ ಭಾಗಗಳಲ್ಲಿ ಸಮಾನ ರೀತಿಯಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವಸದಸ್ಯರು, ಪ್ರಕಾಶ ಪಾಟೀಲ, ಮೃಣಾಲ ಹೆಬ್ಬಾಳಕರ್, ಸಿದ್ದು ಹಾವಣ್ಣವರ, ರವಿ ಮೇಳೆದ್, ಬಸನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ