Kannada NewsKarnataka News
ವಿಧಾನ ಪರಿಷತ್ ಚುನಾವಣೆ: ಮತ ಎಣಿಕೆ ಆರಂಭ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕ, ವಾಯವ್ಯ ಪದವೀಧರ ಹಾಗೂ ಪಶ್ಚಿಮ ಶಿಕ್ಷಕ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆಗೆ ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಸಕಲ ಸಿದ್ಧತೆಗಳಾಗಿದ್ದು, ಮತ ಎಣಿಕೆ ಇನ್ನೇನು ಆರಂಭವಾಗಲಿದೆ.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಈ ಕುರಿತು ಮಾಹಿತಿ ನೀಡಿದ್ದಾರೆ.
ಮತ ಎಣಿಕೆಗೆ ಉಸ್ತುವಾರಿಗಳಾಗಿ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಡಾ.ರವಿಶಂಕರ ಜೆ, ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ಮುನೀಶ್ ಮೌಜ್ಗಿಲ್ ಹಾಗೂ ವಾಯವ್ಯ ಪದವೀಧರ ಕ್ಷೇತ್ರಕ್ಕೆ ರಾಜೇಂದ್ರ ಕುಮಾರ ಕಟಾರಿಯಾ ಆಗಮಿಸಿದ್ದಾರೆ..
ಒಟ್ಟೂ 189 ಸಿಬ್ಬಂದಿ ಮತ ಎಣಿಕೆ ಕಾರ್ಯದಲ್ಲಿ ತೊಡಗಿದ್ದಾರೆ. ಇಬ್ಬರು ಡಿಸಿಪಿ, 5 ಎಸಿಪಿ, 10 ಇನಸ್ಪೆಕ್ಟರ್ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇಲ್ಲಿದೆ ಮತ ಎಣಿಕೆ ಸಿದ್ಧತೆಯ ಪೂರ್ಣ ವಿವರ –





