ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಜನೆವರಿ 5ರಂದು ಕೊನೆಗೊಳ್ಳಲಿರುವ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಯಲಿದೆ. ಇದಕ್ಕಾಗಿ ಮೂರೂ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆೆ ನಡೆಯುತ್ತಿದೆ.
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಆಯ್ಕೆ ಇದಾಗಿದ್ದು, ಜಿಲ್ಲಾ ಪಂಚಾತಿಯಿತಿ, ತಾಲೂಕು ಪಂಚಾಯಿತಿಗಳ ಸದಸ್ಯರ ಅವಧಿ ಮುಂಗಿದಿರುವುದರಿಂದ ಮತದಾರರ ಸಂಖ್ಯೆ ಕಡಿಮೆಯಾಗಲಿದೆ.
ಮೇಲ್ಮನೆಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದ್ದು, ಕಳೆದ ಅವಧಿಯಲ್ಲಿ ಕೆಲಸ ಮಾಡದವರನ್ನು ಬದಲಿಸಿ ಹೊಸಬರಿಗೆ ಮಣೆಹಾಕಲು ಚಿಂತನೆ ನಡೆಸಿವೆ.
ಈಗ ನಿವೃತ್ತರಾಗುವವರಲ್ಲಿ ಕಾಂಗ್ರೆಸ್ ನ 13, ಬಿಜೆಪಿಯ 7 (ಬಿಜೆಪಿ ಬೆಂಬಲಿತ ಪಕ್ಷೇತರ ಸೇರಿ) ಹಾಗೂ ಜೆಡಿಎಸ್ ನ 5 ಸದಸ್ಯರಿದ್ದಾರೆ.
ಎಲ್ಲ ಪಕ್ಷಗಳಿಗೂ ಇರುವ ಸ್ಥಾನ ಉಳಿಸಿಕೊಳ್ಳುವ ಜೊತೆಗೆ ಇನ್ನೂ ಹೆಚ್ಚಿನ ಸ್ಥಾನ ಗಳಿಸಿಕೊಳ್ಳುವುದು ಪ್ರತಿಷ್ಠೆಯಾಗಿದೆ. ಆಕಾಂಕ್ಷಿಗಳ ಪೈಪೋಟಿ ಜೋರಾಗಿದ್ದು, ಮೂರೂ ಪಕ್ಷಗಳು ಮೊದಲ ಸುತ್ತಿನ ಚರ್ಚೆ ನಡೆಸಿವೆ. ಕಾಂಗ್ರೆಸ್ ಆಕಾಂಕ್ಷಿಗಳಿಂದ ಒಂದು ಲಕ್ಷ ರೂ. ಬಿಲ್ಡಿಂಗ್ ಫಂಡ್ ಜೊತೆಗೆ ಅರ್ಜಿ ಸ್ವೀಕರಿಸಿದೆ.
ಜನೆವರಿ 5ರಂದು ನಿವೃತ್ತರಾಗಲಿರುವವರು –
ಕಾಂಗ್ರೆಸ್
- ವಿಜಯ್ ಸಿಂಗ್- ಬೀದರ್ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಬಸವರಾಜ್ ಪಾಟೀಲ್ ಇಟಗಿ- ರಾಯಚೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಕೆ.ಸಿ. ಕೊಂಡಯ್ಯ-ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಆರ್. ಪ್ರಸನ್ನಕುಮಾರ್- ಶಿವಮೊಗ್ಗ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ
- ಎಂ.ಎ. ಗೋಪಾಲಸ್ವಾಮಿ-ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಎಂ. ನಾರಾಯಣಸ್ವಾಮಿ (ಪ್ರತಿಪಕ್ಷ ಸಚೇತಕ)-ಬೆಂಗಳೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಎಸ್.ಆರ್. ಪಾಟೀಲ್ (ಪ್ರತಿಪಕ್ಷ ನಾಯಕ)- ವಿಜಯಪುರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಪ್ರತಾಪ್ ಚಂದ್ರ ಶೆಟ್ಟಿ (ಮಾಜಿ ಸಭಾಪತಿ)- ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಶ್ರೀಕಾಂತ್ ಲಕ್ಷ್ಮಣ್ ಘೋಟ್ನೇಕರ್- ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಶ್ರೀನಿವಾಸ್ ಮಾನೆ (ಹಾಲಿ ಶಾಸಕ-ಹಾನಗಲ್)- ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಆರ್. ಧರ್ಮಸೇನ-ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಎಸ್.ರವಿ- ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ರಘು ಆಚಾರ್- ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ
ಬಿಜೆಪಿ
- ಮಹಾಂತೇಶ್ ಕವಟಗಿಮಠ (ಆಡಳಿತ ಪಕ್ಷದ ಮುಖ್ಯ ಸಚೇತಕ)- ಬೆಳಗಾವಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಕೋಟಾ ಶ್ರೀನಿವಾಸ ಪೂಜಾರಿ (ಸಭಾ ನಾಯಕ)- ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ
- ಬಿ.ಜಿ. ಪಾಟೀಲ್-ಕಲಬುರಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಪ್ರದೀಪ್ ಶೆಟ್ಟರ್- ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಎಂ.ಕೆ. ಪ್ರಾಣೇಶ್ (ಉಪ ಸಭಾಪತಿ) ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಸುನೀಲ್ ಸುಬ್ರಹ್ಮಣಿ -ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ವಿವೇಕರಾವ್ ಪಾಟೀಲ್ (ಬಿಜೆಪಿ ಬೆಂಬಲಿತ ಪಕ್ಷೇತರ)- ಬೆಳಗಾವಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಜೆಡಿಎಸ್
- ಬಸವರಾಜ ಹೊರಟ್ಟಿ (ಸಭಾಪತಿ)- ಪಶ್ಚಿಮ ಶಿಕ್ಷಕರ ಕ್ಷೇತ್ರ ಪ್ರತಿನಿಧಿ.
- ಸಿ.ಆರ್. ಮನೋಹರ್- ಕೋಲಾರ ಸಂಸ್ಥೆಗಳ ಪ್ರತಿನಿಧಿ.
- ಕಾಂತರಾಜು (ಬಿಎಂಎಲ್)- ತುಮಕೂರು ಸಂಸ್ಥೆಗಳ ಪ್ರತಿನಿಧಿ.
- ಎನ್.ಅಪ್ಪಾಜಿ ಗೌಡ (ಪ್ರತಿಪಕ್ಷ ಸಚೇತಕ) ಮಂಡ್ಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಸಂದೇಶ್ ನಾಗರಾಜ್-ಮೈಸೂರು ಸಂಸ್ಥೆಗಳ ಪ್ರತಿನಿಧಿ
ಸರ್ ನಿಮಗೆ ಎಷ್ಟು ಬಾರಿ ಹೇಳಬೇಕು? ಪದೇ ಪದೇ ಹೇಳಿಸಿಕೊಳ್ಳುವುದು ಅಸಹ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ