Kannada NewsKarnataka NewsPolitics

*ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಎಂಎಲ್‌ಸಿ ನಜೀರ್‌ ಅಹ್ಮದ್‌*

ಪ್ರಗತಿವಾಹಿನಿ ಸುದ್ದಿ: ಎಂಎಲ್‌ಸಿ ನಜೀರ್‌ ಅಹ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ.

ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌ ನೀಡಿದ್ದರು. ಅದರ ಬೆನ್ನಲೆ ನಜೀರ್‌ ಅಹ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ.

Home add -Advt

ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸುವುದಾಗಿ ತಿಳಿಸಿದ್ದರು.  ಕೋನೆಗೆ ನಜೀರ್ ಅಹಮ್ಮದ್  ಅವರು ತಮ್ಮ ರಾಜೀನಾಮೆ ಪತ್ರ ಸಿಎಂ ಸಿದ್ದರಾಮಯ್ಯಗೆ ರವಾನಿಸಿದ್ದಾರೆ. 

Related Articles

Back to top button