Karnataka NewsPolitics

*MLC ರವಿಕುಮಾರ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರುನ ಜೆ.ಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನಾ ರವಿಕುಮಾರ್ ವಿರುದ್ಧ ದೂರು ನೀಡಿದ್ದು, ವಿಧಾನಸೌಧ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಎಂಎಲ್ ಸಿ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ನಾಗರತ್ನಾ, ರವಿಕುಮಾರ್ ಒಂದು ಹೆಣ್ಣಿಗೆ ಗೌರವವನ್ನು ಕೊಟ್ಟಿಲ್ಲ. ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರವಿ ಕುಮಾರ್ ಅವರಿಗೆ ತಾಯಿ, ತಂಗಿ, ಅಕ್ಕ ಇದ್ದಾರಲ್ವಾ? ಅವರೆಲ್ಲರೂ ಒಂದು ಹೆಣ್ಣು ತಾನೆ? ರವಿಕುಮಾರ್ ವಿರುದ್ಧ ಮಹಿಳಾ ಆಯೋಗಕ್ಕೂ ದೂರು ನೀಡುತ್ತೇವೆ ಎಂದಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button