ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರೊ.ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥಪಡಿಸಿದೆ.
ವಿಚಾರವಾದಿ ಪ್ರೊ. ಎಂ.ಎಂ. ಕಲ್ಬುರ್ಗಿ ಕೊಲೆ ಪ್ರಕರಣವನ್ನು ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಕೋರಿ ಕಲ್ಬುರ್ಗಿ ಹೆಂಡತಿ ಉಮಾದೇವಿ ಅವರು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ರೋಹಿಂಟನ್ ನಾರಿಮನ್ ಪೀಠ, ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಈಗಾಗಲೇ ಪ್ರಕರಣ ತನಿಖೆ ಪೂರ್ಣ ಮುಗಿದಿದೆ. ಸುಪ್ರೀಂಕೋರ್ಟ್ ಈಗ ತನಿಖೆಯ ಮೇಲ್ವಿಚಾರಣೆ ಮಾಡುವ ಅಗತ್ಯ ಇಲ್ಲ. ತನಿಖೆಯ ಪ್ರಗತಿ ವರದಿ ಪ್ರಕಾರ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಸೆಷನ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ ಎಂದು ಹೇಳಿ, ಅರ್ಜಿ ಇತ್ಯರ್ಥಪಡಿಸಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ