Latest

ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಕಡಲ ನಗರಿ ಮಂಗಳೂರಿನ ಅಸೈಗೋಳಿ ಬಳಿ ನಡೆದಿದೆ.

15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮುಕ್ತಾರ್ ಎಂಬ ರೌಡಿ ಶೀಟರ್ ನನ್ನು ಬಂಧಿಸಿ, ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸ್ ಸಿಬ್ಬಂದಿಗಳ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದಾನೆ. ತಕ್ಷಣ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

Home add -Advt

ಗಾಯಾಳು ರೌಡಿ ಶೀಟರ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 5 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮುಕ್ತಾರ್ ನನ್ನು ಕೆಲದಿನಗಳ ಹಿಂದೆ ಬಂಧಿಸಲಾಗಿತ್ತು. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ, ತಪ್ಪಿಸಿಕೊಂಡು ಎಸ್ಕೇಪ್ ಆಗಲು ಯತ್ನಿಸಿದ್ದಾನೆ ಈ ಹಿನ್ನೆಲೆಯಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಗಾಯಾಳು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಸೇರಿದಂತೆ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Related Articles

Back to top button