Politics

*ಸಂಚಾರಿ ಆರೋಗ್ಯ ಘಟಕ ಸೇವೆ ಇತರ ರಾಜ್ಯಗಳಿಗೂ ಮಾದರಿಯಾಗಿದೆ: ಸಚಿವ ಸಂತೋಷ್‌ ಲಾಡ್‌*

ಪ್ರಗತಿವಾಹಿನಿ ಸುದ್ದಿ: ಕಾರ್ಮಿಕರ ಕೆಲಸದ ಸ್ಥಳಗಳಲ್ಲೇ ಅವರ ಆರೋಗ್ಯ ತಪಾಸಣೆ ಮಾಡುವುದು ಇದೊಂದು ವಿನೂತನ ಕಾರ್ಯಕ್ರಮ. ತೆಲಂಗಾಣ ಮತ್ತು ಒಡಿಶಾ ರಾಜ್ಯದ ಕಾರ್ಮಿಕ ಇಲಾಖೆ ಅಧಿಕಾರಿಗಳು ನಮ್ಮ ಸಂಚಾರಿ ಆರೋಗ್ಯ ಘಟಕಗಳ ಸೇವೆಯ ಬಗ್ಗೆ ಅಧ್ಯಯನ ಮಾಡಿದ್ದಾರೆ. ಅವರ ರಾಜ್ಯದಲ್ಲೂ ಅಳವಡಿಕೆ ಮಾಡಲು ಮುಂದಾಗಿದ್ದಾರೆ. ಇದೇ ನಮ್ಮ ಕಾರ್ಯಕ್ರಮದ ವಿಶೇಷತೆ ಎಂದರು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.  

ಸುಳ್ಳು ದಾಖಲೆ ನೀಡಿ ಮಂಡಳಿಯಲ್ಲಿ ನೋಂದಾಯಿಸಿ ಸೌಲಭ್ಯ ಪಡೆಯುತ್ತಿದ್ದ ಸುಮಾರು ಇಪ್ಪತ್ತೇಳು ಸಾವಿರ ನಕಲಿ ಕಾರ್ಮಿಕರನ್ನು ಪತ್ತೆ ಹಚ್ಚಿ ಅವರಿಂದ ಕಾರ್ಮಿಕ ಕಾರ್ಡ್‌ ಗಳನ್ನು ಮರಳಿ ಪಡೆದಿದ್ದೇವೆ. ಈ ನಕಲಿ ಕಾರ್ಮಿಕರ ಪತ್ತೆ ಪ್ರಕ್ರಿಯೆ ಮುಂದೆಯೂ ನಡೆಯಲಿದೆ. ಅರ್ಹ ಕಾರ್ಮಿಕರಿಗೆ ಮಾತ್ರವೇ ಸರ್ಕಾರದ ಸೌಲಭ್ಯಗಳು ಸಿಗುವಂತಾಗಬೇಕು ಎಂಬುದೇ ನಮ್ಮ ಉದ್ದೇಶ ಎಂದು ವಿವರಿಸಿದರು. 

ಡಿಸಿಎಂಗೆ ಸಂಚಾರಿ ಆರೋಗ್ಯ ಘಟಕದ ಕಾರ್ಯವೈಖರಿ ವಿವರಿಸಿದ ಲಾಡ್‌

ಕಾರ್ಯಕ್ರಮಕ್ಕೆ ಆಗಮಿಸಿದ್ದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನು ಸಂಚಾರಿ ಆರೋಗ್ಯ ಘಟಕದ ವಾಹನದ ಒಳಗೆ ಕರೆದೊಯ್ದ ಸಚಿವ ಸಂತೋಷ್‌ ಲಾಡ್‌ ಅವರು, ವಾಹನಗಳ ಕಾರ್ಯವೈಖರಿಯನ್ನು ವಿವರವಾಗಿ ವಿವರಿಸಿದರು. ಯಾವ ರೀತಿ ತಪಾಸಣೆ ಮಾಡಲಾಗುತ್ತದೆ. ಎಷ್ಟು ಕಾರ್ಮಿಕರಿಗೆ ತಪಾಸಣೆ ನಡೆಸಲಾಗಿದೆ ಎಂಬುದನ್ನು ಒಂದೇ ಕಡೆಯಿಂದ ಟ್ರ್ಯಾಕ್‌ ಮಾಡಬಹುದು ಎಂಬ ಬಗ್ಗೆ ಹೇಳಿದರು. 

Home add -Advt

ಕಾರ್ಯಕ್ರಮದಲ್ಲಿ ಶಾಸಕರಾದ ಸಲೀಂ ಅಹಮದ್‌, ಕಾರ್ಮಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಭಾರತಿ ಡಿ, ಜಂಟಿ ಕಾರ್ಯದರ್ಶಿಗಳಾದ ಸಂಗಪ್ಪ ಉಪಾಸೆ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button