ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ಬೇಗ ಪೂರ್ಣಗೊಳಿಸಿ ಸಂಚಾರಿ ಪಶು ಚಿಕಿತ್ಸಾ ವಾಹನಗಳ ಮೂಲಕ ರೈತರ ಮನೆ ಬಾಗಿಲಿಗೆ ಅಗತ್ಯ ತುರ್ತು ಪಶುವೈದ್ಯಕೀಯ ಸೇವೆಗಳನ್ನು ಪ್ರಾರಂಭಿಸಲು ಪಶು ವಾಹನಕ್ಕೆ ಒಬ್ಬ ಪಶುವೈದ್ಯರು, ಒಬ್ಬ ಅರೆ ತಾಂತ್ರಿಕ ಸಿಬ್ಬಂದಿ ಮತ್ತು ವಾಹನ ಚಾಲಕ ಕಮ್ ಗ್ರೂಪ್ ಡಿ ಸಿಬ್ಬಂದಿಯನ್ನು ಸೇವಾ ಪೂರೈಕೆದಾರರ ಮುಖಾಂತರ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವರಾದ ಪ್ರಭು ಚವ್ಹಾಣ್ ಅವರು ಹೇಳಿದರು.
ಪರಿಷತ್ತಿನಲ್ಲಿ ಇಂದು ಎಸ್.ರವಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪಶು ಸಂಜೀವಿನಿ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಯಡಿ ೧೫ ಆಂಬ್ಯುಲೆನ್ಸಗಳನ್ನು ಖರೀದಿಸಲಾಗಿದೆ. ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ೨೭೫ ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಖರೀದಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಪಶುವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಿಸಿಕೊಂಡು ರೈತರ ಮನೆ ಬಾಗಿಲಿಗೆ ಅಗತ್ಯ ತುರ್ತು ಸಂಚಾರಿ ಪಶು ಚಿಕಿತ್ಸಾ ಸೇವೆಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.
ಪುಸ್ತುತ ೪೦೦ ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ನಿಯಮದ ಭರ್ತಿ ಮಾಡುವ ನೇಮಕಾತಿ ಪ್ರಕ್ರಿಯೆ ಸಹ ಚಾಲ್ತಿಯಲ್ಲಿರುತ್ತದೆ. ಅದರಂತೆ, ೦೮-೦೩-೨೦೨೨ ರಂದು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯೊಂದಿಗೆ ಸಲ್ಲಿಸಿದ ಮೂಲ ದಾಖಲಾತಿಗಳನ್ನು ಪರಿಶೀಲನೆ ಮಾಡಲಾಗಿದ್ದು, ಕನ್ನಡ ಭಾಷೆ ಅಭ್ಯಾಸ ಮಾಡದ ಅಭ್ಯರ್ಥಿಗಳಿಗೆ ಕೆ.ಇ.ಎ. ಮುಖಾಂತರ ಕನ್ನಡ ಭಾಷೆ ಪರೀಕ್ಷೆ ನಡೆಸಲಾಗಿದೆ. ಅದರನ್ವಯ ಅರ್ಹತಾ ಪಟ್ಟಿ ತಯಾರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
*ಹುಬ್ಬಳ್ಳಿ-ಧಾರವಾಡ ಸಂಚಾರ ದಟ್ಟಣೆ ನಿರ್ವಹಣೆ: ಅವಳಿ ನಗರದ 5 ಪ್ರಮುಖ ವೃತ್ತಗಳ ಅಭಿವೃದ್ಧಿಗೆ ಕ್ರಮ*
https://pragati.taskdun.com/hubli-dharwadtrafic-management-5-circle-development/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ