Kannada NewsKarnataka News

ಮೋದಿ ಜನ್ಮದಿನ – ಸ್ವಚ್ಛತಾ ಹೀ ಸೇವಾ ಅಭಿಯಾನ

ಮೋದಿ ಜನ್ಮದಿನ – ಸ್ವಚ್ಛತಾ ಹೀ ಸೇವಾ ಅಭಿಯಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಿಂಡಲಗಾ ಗ್ರಾಮದ  ಮಂದಿರದ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಹಿಳಾ ರಾಜ್ಯಾಧ್ಯಕ್ಷರಾದ  ಭಾರತಿ ಶೆಟ್ಟಿ ಹಾಗೂ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ  ಪ್ರೇಮಾ ಭಂಡಾರಿ ಹಾಗೂ ಮಾಜಿ ಶಾಸಕರಾದ ಸಂಜಯ ಪಾಟೀಲ ಇವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರ ಕನಸಾದ ಸ್ವಚ್ಛ ಭಾರತದ ಕನಸನ್ನು ಸಾಕಾರಗೊಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ವಚ್ಛಭಾರತ ಅಭಿಯಾನವನ್ನು ಕೈಗೆತ್ತಿಕೊಂಡರು, ಅದಕ್ಕೆ ನಾವೆಲ್ಲರೂ ಅವರಿಗೆ ಕೈಜೋಡಿಸಿ ನಮ್ಮ ಪರಿಸರ, ನಮ್ಮ ಊರು, ನಮ್ಮ ದೇಶದ ಸ್ವಚ್ಛತೆಗಾಗಿ ಶ್ರಮಪಡಬೇಕೆಂದು ಹೇಳಿದರು.

ನಮ್ಮ ದೇಶವನ್ನು ಅತ್ಯಂತ ವೇಗದರೀತಿಯಲ್ಲಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯೂತ್ತಿರುವ ಇಂತಹ ಆದರ್ಶಪ್ರಾಯರಾದ ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಅವರಿಗೆ ಶುಭಹಾರೈಸಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಹಾಗೂ ದೇವರಲ್ಲಿ ಅವರ ಆರೋಗ್ಯ ಹಾಗೂ ಆಯಸ್ಸನ್ನು ವೃದ್ಧಿಸಲೆಂದು ಪ್ರಾರ್ಥಿಸೋಣ ಎಂದು ಹೇಳಿದರು.

ಮಹಿಳಾ ರಾಜ್ಯಾಧ್ಯಕ್ಷರಾದ ಭಾರತಿ ಶೆಟ್ಟಿ, ಮಹಿಳಾ ಜಿಲ್ಲಾಧ್ಯಕ್ಷರಾದ ಪ್ರೇಮಾ ಭಂಡಾರಿ, ಪ್ರಧಾನ ಕಾರ್ಯದರ್ಶಿ ಪ್ರವೀಣ ಪಾಟೀಲ, ಬೆಳಗಾವಿ ಗ್ರಾಮೀಣ ಮಹಿಳಾ ಅಧ್ಯಕ್ಷ  ಜ್ಯೋತಿ ಕುಲಕರ್ಣಿ, ಉಪಾಧ್ಯಕ್ಷ ಶ್ರೀಮತಿ ಭಾಗ್ಯಶ್ರೀ ಕೋಕಿತಕರ, ಹಿಂಡಲಗಾ ಗ್ರಾಮದ ಮಹಿಳೆಯರು, ಕಾರ್ಯಕರ್ತರು ಹಾಗೂ ಗ್ರಾಮಸ್ತರು ಪಾಲ್ಗೊಂಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button