Election NewsKannada NewsKarnataka NewsPolitics

ಮೋದಿ ಸಮಾವೇಶ ರದ್ದು

ಪ್ರಗತಿವಾಹಿನಿ ಸುದ್ದಿ – ಲೋಕಸಭಾ ಚುನಾವಣೆ ಹಿನ್ನೆಲೆ ಆಯೋಜನೆ ಮಾಡಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶ ತಾಂತ್ರಿಕ ಕಾರಣದಿಂದ ರದ್ದಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. 

ಏ. 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ತಾಂತ್ರಿಕ ಕಾರಣಗಳಿಂದ ರದ್ದಾಗಿದ್ದು, ಬೆಂಗಳೂರಿನಲ್ಲಿ ನಡೆಯಬೇಕಿದ್ದ ರೋಡ್ ಶೋ ಯತಾಪ್ರಕಾರ ನಡೆಯಲಿದೆ ಎಂದು ಬಿಜೆಪಿ ತಿಳಿಸಿದೆ.

ಕರಾವಳಿಯ ಎರಡು ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಅಭ್ಯರ್ಥಿಗಳಲ್ಲಿ ಹೊಸ ಹುರುಪು ತಂದಿತ್ತು, ಅಲ್ಲದೆ ಬಿಜೆಪಿ ಕೂಡ ದಾಖಲೆ ಮಟ್ಟದಲ್ಲಿ ಜನರನ್ನು ಸೇರಿಸುವುದಾಗಿ ಹೇಳಿತ್ತು, ಇಂದು ಬೆಳಗ್ಗೆ ಮೈದಾನದಲ್ಲಿ ಚಪ್ಪರ ಮುಹೂರ್ತವನ್ನೂ ನಡೆಸಲಾಗಿತ್ತು. ಜರ್ಮನ್ ಟೆಂಟ್ ಹಾಕಲು ಸಿದ್ಧತೆ ನಡೆಸಲಾಗಿತ್ತು. ಆದರೆ ಮಂಗಳೂರಿನ ಕಾರ್ಯಕ್ರಮ‌ ಕೊನೆ ಕ್ಷಣದಲ್ಲಿ ರದ್ಧಾಗಿದೆ.‌

Home add -Advt

Related Articles

Back to top button