
ಪ್ರಗತಿವಾಹಿನಿ ಸುದ್ದಿ: 18ನೇ ಲೋಕಸಭಾ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದು, ಮೂರನೇ ಬಾರಿ ಎನ್ ಡಿಎ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ.
ಹಳೇ ಸಂಸದೀಯ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಎನ್ ಡಿಎ ನೂತನ ಸಂಸದರ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಎನ್ ಡಿಎ ಸಂಸದೀಯ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಮೂಲಕ ಮೋದಿ ಮೂರನೇ ಭಾರಿ ದೇಶದ ಪ್ರಧಾನಿಯಾ ಅಧಿಕಾರ ಸ್ವೀಕರಿಸಲಿದ್ದಾರೆ.
ಜೂನ್ 9ರಂದು ಭಾನುವಾರ ಸಂಜೆ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಇದೇ ವೇಳೆ ಕೆಲ ಸಂಸದರು ಕೂಡ ಕೇಂದ್ರಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ