ಕರ್ನಾಟಕಕ್ಕೆ ಮೋದಿ ಕೊಟ್ಟಿರೋದು ಖಾಲಿ ಚೊಂಬು: ಸುರ್ಜೆವಾಲಾ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದ್ದು, ಪ್ರಧಾನಿ ಮೋದಿಯವರು ರಾಜ್ಯಕ್ಕೆ ಚೊಂಬು ನೀಡಿದ್ದಾರೆ. ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ, ಇವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ವಾಗ್ದಾಳಿ ನಡೆಸಿದರು.
ಗುರುವಾರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಅನ್ಯಾಯ ಮಾಡುವುದೇ ಮೋದಿ ಸರ್ಕಾರದ ಡಿಎನ್ಎ. ಕೇಂದ್ರ ಸರ್ಕಾರದ ತಾರತಮ್ಯದ ಬಗ್ಗೆ ಕನ್ನಡಿಗರಲ್ಲಿ ಆಕ್ರೋಶ ಮಡುಗಟ್ಟಿದೆ. ಮೋದಿ ಮತ್ತು ಅಮಿತ್ಶಾಗೆ ಗೋ ಬ್ಯಾಕ್ ಎಂದು ಕನ್ನಡಿಗರು ಹೇಳುವ ವಾತಾವರಣ ಉಂಟಾಗಿದೆ.
ಮೇಕೆದಾಟು, ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಮೋದಿಯವರು ಅನುಮತಿ ಕೊಡಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಜೇಬಿನಲ್ಲಿಯೇ ಚುನಾವಣೆಯ ಆಯೋಗ ಇದೆ. ಆದರೂ ಚುನಾವಣೆಯಲ್ಲಿ ದ್ವೃಷದ ರಾಜಕಾರಣ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಮೋದಿಗೆ ಹೆದರಿಕೆ ಪ್ರಾರಂಭವಾಗಿದೆ. ಮುಖದಲ್ಲಿ ನಗು ಕಾಣಿಸುತ್ತಿಲ್ಲ. ಯಾವ ಮುಖ ಇಟ್ಟುಕೊಂಡು ಚುನಾವಣೆ ಎದುರಿಸುತ್ತಾರೆ ಎಂದು ಪ್ರಶ್ನಿಸಿದರು.
ಕರ್ನಾಟಕಕ್ಕೆ ಅನ್ಯಾಯ ಮಾಡುವುದೇ ಮೋದಿ ಸರ್ಕಾರದ ಡಿಎನ್ಎ. ಕೇಂದ್ರ ಸರ್ಕಾರದ ತಾರತಮ್ಯದ ಬಗ್ಗೆ ಕನ್ನಡಿಗರಲ್ಲಿ ಆಕ್ರೋಶ ಮಡುಗಟ್ಟಿದೆ. ಮೋದಿ ಮತ್ತು ಅಮಿತ್ಶಾಗೆ ಗೋ ಬ್ಯಾಕ್ ಎಂದು ಕನ್ನಡಿಗರು ಹೇಳುವ ವಾತಾವರಣ ಉಂಟಾಗಿದೆ. ಮೇಕೆದಾಟು, ಮಹದಾಯಿ, ಕಳಸಾ ಬಂಡೂರಿ ಯೋಜನೆಗೆ ಮೋದಿಯವರು ಅನುಮತಿ ಕೊಡಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ₹6 ಸಾವಿರ ಕೋಟಿ ಬಿಡುಗಡೆ ಮಾಡಿಲ್ಲ. ರಾಜ್ಯದಿಂದ ಕೇಂದ್ರಕ್ಕೆ ₹100 ತೆರಿಗೆ ಕೊಟ್ಟರೆ ಅಲ್ಲಿಂದ ರಾಜ್ಯಕ್ಕೆ ಕೇವಲ ₹13 ವಾಪಸ್ ಕೊಡುತ್ತಿದ್ದಾರೆ ಎಂದು ಟೀಕಿಸಿದರು.
ನೇಹಾ ಕೊಲೆಯ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ರಾಜ್ಯ ಸರಕಾರ ತನಿಖೆಯನ್ನು ಚುರುಕುಗೊಳಿಸಿದೆ. ವಿಶೇಷ ನ್ಯಾಯಾಲಯದ ಸ್ಥಾಪಿಸುವ ಮೂಲಕ ತ್ವರಿತವಾಗಿ ಆಕೆಯ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸವಾಗುತ್ತಿದೆ. ಆದರೆ ಬಿಜೆಪಿಯವರು ಸಾವಿನಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಬಿಜೆಪಿ ಎಸ್ಸಿ, ಎಸ್ಟಿ, ಒಬಿಸಿ ವಿರೋಧಿ ಇದೆ. ಇದಕ್ಕೆ ಉದಾಹರಣೆ ಎಂದರೆ ನಿಮ್ಮ ಪಕ್ಷದ ಲೋಕಸಭೆ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ ಹೆಗಡೆ ನೀಡುವ ಹೇಳಿಕೆಗಳು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ, ಶಾಸಕರಾದ ಅಶೋಕ ಪಟ್ಟಣ, ಗಣೇಶ್ ಹುಕ್ಕೇರಿ, ಮಹಾಂತೇಶ ಕೌಜಲಗಿ, ಆಸೀಫ್ ( ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ್, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಕೆಪಿಸಿಸಿ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕದ ಕಾರ್ಯಕರ್ತರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ