Latest

*ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದ್ದಾರೆ; ಕೆಂಡ ಕಾರಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾದ ಬಹಿರಂಗ ಪತ್ರವೊಂದು ಹರಿದಾಡುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸೋಲಿನ ಭೀತಿಯಿಂದ ಹತಾಶಾರಾಗಿರುವ ಬಿಜೆಪಿ ಸರ್ಕಾರದ ನಾಯಕರು ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇಂತಹ ಯಾವುದೇ ಪತ್ರವನ್ನು ನಾನು ಬರೆದಿಲ್ಲ. ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಸುಳ್ಳು ಪತ್ರಕ್ಕೆ ಬಲಿಯಾಗಬಾರದು ಎಂದು ಮನವಿ ಮಾಡಿದ್ದಾರೆ.

Home add -Advt

ಡಿ.ಕೆ.ಶಿವಕುಮಾರ್ ಹಾಗೂ ನನ್ನ ಸಂಬಂಧ ಸೌಹಾರ್ದಯುತವಾಗಿದೆ. ಇದಕ್ಕೆ ಹುಳಿ ಹಿಂಡುವ ಕೆಲಸ ಯಶಸ್ಸು ಕಾಣಲಾರದು. ಖೊಟ್ಟಿ ಪತ್ರದ ಬಗ್ಗೆ ಶೀಘ್ರದಲ್ಲಿ ಪೊಲೀಸರಿಗೆ ದೂರು ನೀಡಿ, ಕಿಡಿಗೇಡಿತನದ ಪತ್ರ ಹಂಚುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಹಿತದೃಷ್ಟಿಯಿಂದ ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೆ. ಆದರೆವ್ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿ.ಕೆ.ಶಿವಕುಮಾರ್ ಅವರು ಯಶಸ್ವಿಯಾಗಿದ್ದಾರೆ. ಆದರೂ ರಾಜ್ಯವನ್ನು ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದ ನನ್ನ ಆಸೆಗೆ ಎಳ್ಳುನೀರು ಬಿಟ್ಟಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಒಬಿಸಿ ವರ್ಗದ ಆಕಾಂಕ್ಷಿಗಳಿಗೆ ಡಿ.ಕೆ.ಶಿವಕುಮಾರ್ ಅನ್ಯಾಯ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಇದು ಬಿಜೆಪಿ ಕುತಂತ್ರವಾಗಿದ್ದು, ಕಮಲನಾಯಕರು ಮಾಡುತ್ತಿರುವ ಅಪಪ್ರಚಾರ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

https://pragati.taskdun.com/vidhanasabha-electionspecial-trainbangalore-to-belagavibangalore-to-bidarkarwar/


Related Articles

Back to top button