
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬಿಜೆಪಿ ಹಿರಿಯ ನೇತಾರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ವಿಧಾನಸಭೆಯಲ್ಲಿ ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಬೆನ್ನಿಗೇ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು “ಇದು ಹೆಮ್ಮೆಯ ವಿಷಯ” ಎಂದಿದ್ದಾರೆ.
ಬಿಎಸ್ ವೈ ಮಾತಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು “ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ” ಎಂದು ಟ್ವೀಟ್ ಮಾಡಿದ್ದರು.
ಪ್ರಧಾನಿ ಅವರು ಶ್ಲಾಘಿಸಿದ ಟ್ವೀಟ್ ಗೆ ಪ್ರತಿಯಾಗಿ ಹೆಮ್ಮೆ ವ್ಯಕ್ತಪಡಿಸಿರುವ “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ, ಪಕ್ಷದ ವರಿಷ್ಠ ನಾಯಕರು ಹಾಗೂ ನನ್ನ ಮಾರ್ಗದರ್ಶಕರಾದ ಬಿ.ಎಸ್.ಯಡಿಯೂರಪ್ಪ ಅವರು ನೀಡಿದ ಭಾಷಣವನ್ನು ಪ್ರಧಾನಿಯವರು ತುಂಬು ಹೃದಯದಿಂದ ಕೊಂಡಾಡಿರುವುದು ಹೆಮ್ಮೆಯ ಸಂಗತಿ. ತಾವೊಬ್ಬ ವಿನಮ್ರ ಕಾರ್ಯಕರ್ತ ಅನ್ನುವ ಮೂಲಕ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ.” ಎಂದು ಟ್ವೀಟಿಸಿದ್ದಾರೆ.
ಇನ್ನೊಂದು ಟ್ವೀಟ್ ನಲ್ಲಿ “ಸ್ಥಾನಮಾನವನ್ನು ಲೆಕ್ಕಿಸದೆ ಒಳಿತನ್ನು ಮೆಚ್ಚಿ ಬೆನ್ನು ತಟ್ಟುವ ಶ್ರೀ ನರೇಂದ್ರ ಮೋದಿಜೀ ಅವರ ಗುಣ ಅನುಕರಣೀಯ. ಹಾಗೂ ಬಿಎಸ್ ವೈ ಅವರು ನಾನು ಮಂಡಿಸಿದ ಬಜೆಟ್ ಬಗ್ಗೆ ವ್ಯಕ್ತಪಡಿಸಿದ ಶ್ಲಾಘನೆಯ ಮಾತುಗಳು ನನಗೆ ಪ್ರೇರಣೆಯಾಗಿವೆ” ಎಂದು ಹೇಳಿದ್ದಾರೆ.
*ಕಾಂಗ್ರೆಸ್ ನಿಂದ ಮತ್ತೊಂದು ಮಹತ್ವದ ಘೋಷಣೆ*
https://pragati.taskdun.com/d-k-shivakumarcongress10kg-free-raice-pressmeetsiddaramaiah/
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ತೃಪ್ತಿ ತಂದಿದೆ: ಲಕ್ಷ್ಮೀ ಹೆಬ್ಬಾಳಕರ
https://pragati.taskdun.com/development-of-belagavi-rural-sector-is-satisfactory-lakshmi-hebbalakar/
*ಹೆಂಡತಿಯನ್ನೇ ಬರ್ಬರವಾಗಿ ಕೊಲೆಗೈದ ಗಂಡ*
https://pragati.taskdun.com/wifemurderhusbandraichur/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ