Latest

ಮೊಹಮ್ಮದ್ ನಲಪಾಡ್ ಪೊಲೀಸರ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದ ಸಂದರ್ಭದಲ್ಲಿ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದ ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ದೇಶದ್ರೋಹದ ಆರೋಪ ಮಾಡಿದ್ದು, ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಎದುರು ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈಶ್ವರಪ್ಪ ಹುಚ್ಚ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮೊಹಮ್ಮದ್ ನಲಪಾಡ್ ಹಾಗೂ ಹಲವು ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಈ ವೇಳೆ ಪೊಲಿಸರು ಮೊಹಮ್ಮದ್ ನಲಪಾಡ್ ಹಾಗೂ ಇತರ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದು, ವಶಕ್ಕೆ ಪಡೆದಿದ್ದಾರೆ. ಸಚಿವ ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಿಸಲ್ಲ ಎಂದು ಕಿಡಿಕಾರಿರುವ ಮೊಹಮ್ಮದ್ ನಲಪಾಡ್, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಕೆಳಮಟ್ಟಕ್ಕೆ ಹೋಗುವ ರಾಜಕಾರಣ; ಕಾಂಗ್ರೆಸ್ ವಿರುದ್ಧ ಸಿಎಂ ಆಕ್ರೋಶ

Home add -Advt

Related Articles

Back to top button