Karnataka NewsLatestPolitics

*ಗಾಳಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಬೆಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಗಾಳಿ ಆಮ್ಜನೇಯ ದೇವಸ್ಥಾನಕ್ಕೆ ಆಗಮಿಸಿ ಆಂಜನೇಯನ ದರ್ಶನ ಪಡೆದರು. ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಅಖಿಲ ಭಾರತ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ, ಕ್ಷತ್ರಿಯ ಪ್ರಚಾರಕ್ ಭರತ್ ಕುಮಾರ್ ಉಪಸ್ಥಿತರಿದ್ದರು.

ಆರ್.ಎಸ್.ಎಸ್ ನೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಾಳೆ ನವೆಂಬರ್ ೮ ಹಾಗೂ ೯ ರಂದು ಆರ್.ಎಸ್.ಎಸ್ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೋಹನ್ ಭಾಗವತ್ ಮಾತನಾಡಲಿದ್ದಾರೆ. ಈ ನಿಟ್ಟಿನಲ್ಲಿ ಇಂದು ಮೋಹನ್ ಭಾಗವತ್ ಬೆಂಗಳೂರಿಗೆ ಆಗಮಿಸಿದ್ದಾರೆ.

Home add -Advt

Related Articles

Back to top button