*ಒಡಿಶಾದ ನೂತನ ಸಿಎಂ ಆಗಿ ಮೋಹನ್‌ಚರಣ್ ಮಾಝ ಇಂದು ಪ್ರಮಾಣ ವಚನ ಸ್ವೀಕಾರ*
ಪ್ರಗತಿವಾಹಿನಿ ಸುದ್ದಿ: ಒಡಿಶಾ ವಿಧಾನಸಭೆಯಲ್ಲಿ ಬಹುಮತ ಸಾಧಿಸಿರುವ ಬಿಜೆಪಿ, ಸರ್ಕಾರ ರಚನೆ ಮಾಡಲಿದೆ. ಒಡಿಶಾ ನೂತನ ಸಿಎಂ ಆಗಿ, ಮೋಹನ್‌ಚರಣ್ ಮಾಝ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೇಶದ ಪ್ರಧಾನಿಯಾಗಿ ಕೆಲ ದಿನಗಳ ಹಿಂದೆ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದರು. ಇದೀಗ ಒಡಿಶಾದ ಸರ್ಕಾರ ರಚನೆಗೆ ಸಮಯ ಪಿಕ್ಸ್ ಆಗಿದ್ದು, ಸಿಎಂ ಆಗಿ, ಮೋಹನ್‌ಚರಣ್ ಮಾಝ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆ ಇಬ್ಬರಿಗೆ ಡಿಸಿಎಂ ಸ್ಥಾನ ನೀಡಲಾಗಿದೆ. ಉಪಮುಖ್ಯಮಂತ್ರಿಯಾಗಿ ಕನಕ್ ವರ್ಧನ್ ಸಿಂಗ್ ಡಿಯೋ ಮತ್ತು ಪ್ರವತಿ ಪರಿದಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದಿರುವ ಮೋಹನ್ ಚರಣ್ ಮಾಝಿ 4 ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮೋಹನ್ ಚರಣ್ ಮಾಝಿ ಅವರು ಈ ಬಾರಿಯ ಚುನಾವಣೆಯಲ್ಲಿ ಕಿಯೋಂಜಾರ್ ವಿಧಾನಸಭಾ ಕ್ಷೇತ್ರದಿಂದ ಬಿಜು ಜನತಾ ದಳದ ಮಿನಾ ಮಾಝಿ ಅವರನ್ನು 11,577 ಮತಗಳಿಂದ ಸೋಲಿಸಿದರು.
ಇಂದಿನ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತಿತರರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಒಡಿಶಾದಲ್ಲಿ ಹೊಸ ಮುಖ್ಯಮಂತ್ರಿ ಮತ್ತು ಮಂತ್ರಿ ಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭದ ಕಾರಣದಿಂದ ಇಂದು ಮಧ್ಯಾಹ್ನ 1 ಗಂಟೆಯ ನಂತರ ಭುವನೇಶ್ವರದಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಮತ್ತು ನ್ಯಾಯಾಲಯಗಳನ್ನು ಮುಚ್ಚಲಾಗುವುದು ಎಂದು ಒಡಿಶಾ ಸರ್ಕಾರ ಘೋಷಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ