Kannada NewsKarnataka NewsLatestPolitics

*ಬೆಂಗಳೂರು ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ; ವಿದ್ಯಾರ್ಥಿನಿಯರಿಗೆ ಕಿರುಕುಳ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದಲ್ಲಿ ವಿದ್ಯಾರ್ಥಿಗಳು ಅಶ್ಲೀಲವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ.

Home add -Advt

ಬೆಂಗಳೂರಿನ ಬಸವೇಶರ ನಗರದಲ್ಲಿರುವ ಕಾರ್ಮೆಲ್ ಶಾಲೆಯಲ್ಲಿ 8 ನೇ ತರಗತಿ ವಿದ್ಯಾರ್ಥಿಗಳು ಅಶ್ಲೀಲವಾಗಿ ವರ್ತಿಸಿದ್ದು, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿದ್ಯಾರ್ಥಿಗಳ ಕಿರುಕುಳದ ಬಗ್ಗೆ ವಿದ್ಯಾರ್ಥಿನಿಯರು ಪೋಷಕರ ಬಳಿ ಅಳಲು ತೋಡಿಕೊಂಡಿದ್ದು, ಪೋಷಕರು ಶಾಲಾ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ ಈ ಬಗ್ಗೆ ನಿರ್ಲಕ್ಷ್ಯ ಮಾಡಿದ್ದಕ್ಕೆ ಪೋಷಕರು ಬಸವೇಶ್ವರನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಸಭ್ಯ ವರ್ತನೆ ತೋರಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ತರಗತಿಯಲ್ಲಿರುವ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.


Related Articles

Back to top button