Latest

*ನಾಳೆ ಅಪ್ಪಳಿಸಲಿದೆ ಮೋಕಾ ಚಂಡಮಾರುತ; ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೋಕಾ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಮುಂದಿನ ಮೂರು ದಿನಗಳಕಾಲ ವರುಣಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿದ್ದು ಮೋಕಾ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಪ್ರಸಕ್ತ ವರ್ಷದ ಮೊದಲ ಚಂಡಮಾರುತ ಇದಾಗಿದ್ದು, ನಾಳೆ ಅಪ್ಪಳಿಸುವ ಸಾಧ್ಯತೆ ಇದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಲ್ಲೇ ಚಂಡಮಾರುತ ಬೀಸುತ್ತಿದ್ದು, ರಾಜ್ಯದಲ್ಲಿ ಮತದಾನದ ಮೇಲೆ ಮಳೆ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ.

ಬಂಗಾಳಕೊಲ್ಲಿಯಲ್ಲಿಯ ನೈಋತ್ಯ ಭಾಗದಲ್ಲಿ ಮಾರುತಗಳು ಮುಂದಿನ 24 ಗಂಟೆಯಲ್ಲಿ ತೀವ್ರಗೊಂಡು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಪರಿಣಾಮ ತಮಿಳುನಾಡು, ಕೇರಳ, ಕರ್ನಾಟಕ, ಆಂದ್ರಪ್ರದೆಶ, ಒಡಿಶಾ, ಅಂಡಮಾನ್, ನಿಕೋಬಾರ್ ಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

https://pragati.taskdun.com/heavy-rain-in-belgaum-2/
https://pragati.taskdun.com/devendra-fadnaviselection-campaignshashikala-jolle/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button