
ಪ್ರಗತಿವಾಹಿನಿ ಸುದ್ದಿ, ಕೋಲಾರ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜು ಆಡಳಿತಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ FIR ದಾಖಲಿಸಲಾಗಿದೆ.
ಕಳೆದ ಮೇ 26ರಂದು ಆಡಳಿತಾಧಿಕಾರಿ ಜಾನ್ಸನ್ ಕುಂದರ್ ಅವರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆ.30ರಂದು ಇಬ್ಬರು ವಿದ್ಯಾರ್ಥಿನಿಯರು ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದರ್ ಅವರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ನರ್ಸಿಂಗ್ ಕೋರ್ಸ್ ನ ವಾರ್ಷಿಕ ಶುಲ್ಕ ಕಡಿಮೆ ಮಾಡುವ ನೆಪದಲ್ಲಿ ಈ ಕೃತ್ಯವೆಸಗಿದ್ದಾಗಿ ಆರೋಪಿಸಲಾಗಿದೆ. ಆದರೆ ಕಾಲೇಜಿನ ಪ್ರಾಚಾರ್ಯರು ಸೇರಿದಂತೆ ಕೆಲವರು ಈ ಆರೋಪ ತಳ್ಳಿ ಹಾಕಿದ್ದು ಇದು ಸುಳ್ಳು ಆರೋಪ ಎಂದು ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.
ಅವರು ಆಡಳಿತಾಧಿಕಾರಿಯಾಗಿ ನೇಮಕವಾದ ನಂತರ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿದ್ದು ಈ ಏಳಿಗೆ ಸಹಿಸದೆ ಕೆಲವರು ಅವರ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಕಾಲೇಜು ಸಾಕಷ್ಟು ಹಳೆಯದಾಗಿದ್ದು ಇಲ್ಲಿ ಕರ್ನಾಟಕವಷ್ಟೇ ಅಲ್ಲದೆ ಕೇರಳ ರಾಜ್ಯದ ಯುವತಿಯರೂ ಬಂದು ನರ್ಸಿಂಗ್ ಕೋರ್ಸ್ ಮಾಡುತ್ತಿದ್ದಾರೆ.
KPTCL Updates: ಜ್ಯೂನಿಯರ್ ಲೈನ್ ಮ್ಯಾನ್ ಬಂಧನ; ಬಂಧಿತರೆಲ್ಲರಿಗೆ ಜಾಮೀನು ನಿರಾಕರಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ