Latest

ಹುಬ್ಬಳ್ಳಿ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಹಣ ವಶ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಹುಬ್ಬಳ್ಳಿ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಗಜೇಂದ್ರಗಡದಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ 4.43 ಲಕ್ಷ ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಧಿಕೃತ ದಾಖಲೆಗಳಿಲ್ಲದ ಹಿನ್ನೆಲೆಯಲ್ಲಿ ಹಣ ವಶಕ್ಕೆ ಪಡೆಯಲಾಗಿದೆ.

Home add -Advt

ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಅಧಿಕೃತವಾಗಿ ಜಾರಿಗೆ ಬರದಿದ್ದರೂ ಈಗಲೇ ಎಲ್ಲ ಅಕ್ರಮಗಳ ಮೇಲೆ ಕಣ್ಣಿಡಲಾಗಿದೆ. ಹುಬ್ಬಳ್ಳಿ ಬಳಿ ಅಕ್ರಮ ಮದ್ಯವನ್ನೂ ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿಯಲ್ಲೂ ಈಗಾಗಲೆ ಸುಮಾರು ನಗದು, ವಸ್ತುಗಳಉ ಸೇರಿದಂತೆ 2 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

https://pragati.taskdun.com/night-operation-11-lakhs-seized-in-many-places-in-belgaum-district/
https://pragati.taskdun.com/belagavi13-lakhseizedmarket-police/

Related Articles

Back to top button