ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳವಟ್ಟಿ ಗ್ರಾಮದ ಶ್ರೀ ಗಣೇಶ ಮಂದಿರದ ಜೀರ್ಣೋದ್ಧಾರದ ಕಾಮಗಾರಿಯ ಸಲುವಾಗಿ 5 ಲಕ್ಷ ರೂ.ಗಳ ಚೆಕ್ ನ್ನು ದೇವಸ್ಥಾನದ ಕಮೀಟಿಯವರಿಗೆ ಹಸ್ತಾಂತರಿಸಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯಿಂದ ಈ ಹಣ ನೀಡಲಾಗುತ್ತಿದ್ದು, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಮತ್ತು ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನ ಕಮೀಟಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ