ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿಎಂ ಬಿ.ಎಸ್ ವೈ ಹಾಗೂ 6 ಜನರ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ಇಡಿಗೆ ದೂರು ನೀಡಿದ್ದು, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಎಂ ಕುಟುಂಬದ ವಿರುದ್ಧ ಪಿಎಂಎಲ್ ಎ ಅಡಿ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದರು. 2020 ನವೆಂಬರ್ 27ರಂದೇ ಇಡಿ ಈ ದೂರು ಸ್ವೀಕರಿಸಿದ್ದು, ಈ ನಿಟ್ಟಿನಲ್ಲಿ ಇದೀಗ ತನಿಖೆ ನಡೆಸುವ ಸಾಧ್ಯತೆ ಇದೆ.
ಅಕ್ರಮ ಹಣ ವರ್ಗಾವಣೆ ಹಾಗೂ ಸಿಎಂ ಅಧಿಕಾರ ದುರುಪಯೋಗಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ, ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ಮೊಮ್ಮಗ ಶಶಿಧರ್ ಹಾಗೂ ಇನ್ನೂ ಮೂವರ ವಿರುದ್ಧ ಇಡಿಗೆ ದೂರು ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆಯೇ ಇದೀಗ ಈ ಪ್ರಕರಣ ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ದಟ್ಟವಾಗಿದೆ.
ಅನ್ ಲಾಕ್ 2.0ಗೆ ಮುಹೂರ್ತ ಫಿಕ್ಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ